ಸಾಕಷ್ಟು ಭಿನ್ನವಾಗಿ ‘ಮೋಡ ಕವಿದ ವಾತಾವರಣ’ ಸಿನಿಮಾದ ಪ್ರಚಾರ ಮಾಡಿದ ಸಿಂಪಲ್ ಸುನಿ

Updated on: Jun 15, 2026 | 8:25 AM

ಸಿಂಪಲ್ ಸುನಿ ಬಗ್ಗೆ ನಿಮಗೆ ಗೊತ್ತೇ ಇದೆ. ಅವರು ಕನ್ನಡ ಚತ್ರರಂಗದ ಸ್ಟಾರ್ ನಿರ್ದೇಶಕ. ಸರಳ ಕಥೆಗಳನ್ನು ಮಾಡುವ ಅವರು ಜನರಿಂದ ಭಾರೀ ಮೆಚ್ಚುಗೆ ಪಡೆಯುತ್ತಾರೆ. ಈಗ ಅದಕ್ಕೆ ಹೊಸ ಸೇರ್ಪಡೆ ಆಗಿದೆ. ‘ಮೋಡ ಕವಿದ ವಾತಾವರಣ’ ಚಿತ್ರದ ಮೂಲಕ ಅವರು ಚಿತ್ರರಂಗಕ್ಕೆ ಕಂಬ್ಯಾಕ್ ಮಾಡುತ್ತಿದ್ದಾರೆ. ಈ ಸಿನಿಮಾದ ಪ್ರಚಾರವನ್ನು ಭಿನ್ನವಾಗಿ ಮಾಡುತ್ತಿದ್ದಾರೆ.

ಸಿಂಪಲ್ ಸುನಿ ಅವರು ಹೊಸ ಪ್ರತಿಭೆಗಳಿಗೆ ಹೆಚ್ಚು ಮಣೆ ಹಾಕುತ್ತಾರೆ. ಇದಕ್ಕೆ ಹೊಸ ಸೇರ್ಪಡೆ ‘ಮೋಡ ಕವಿದ ವಾತಾವರಣ’ ಸಿನಿಮಾ. ಈ ಚಿತ್ರದಲ್ಲಿ ಸುತನ್ ದಿಲೀಪ್, ಐಶ್ ಆರಾಧ್ಯ, ತೇಜಸ್ ರಾಜ್, ಸುಷ್ಮಾಶ್ರೀ ಮೊದಲಾದವರು ನಟಿಸಿದ್ದಾರೆ. ಈ ಸಿನಿಮಾದ ಟೀಸರ್ ಜೂನ್ 16ರಂದು ರಿಲೀಸ್ ಆಗಲಿದೆ. ಇದರ ಪ್ರೋಮೋನ ಸುನಿ ರಿಲೀಸ್ ಮಾಡಿದ್ದಾರೆ. ಈ ವಿಡಿಯೋ ಸಾಕಷ್ಟು ಗಮನ ಸೆಳೆಯುವ ರೀತಿಯಲ್ಲಿ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More