‘ಪಕ್ಕಾ 100 ಡೇಸ್ ಅನ್ನೋದು ಬಿಟ್ಟುಬಿಡಬೇಕು’; ಕಾರಣ ತಿಳಿಸಿದ ಸಿಂಪಲ್ ಸುನಿ
‘ಒಂದು ಸರಳ ಪ್ರೇಮಕಥೆ’ ಚಿತ್ರದ ಸೂಪರ್ ಹಿಟ್ ಆಗಿದೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇತ್ತು. ಆ ನಿರೀಕ್ಷೆಯನ್ನು ಮೀರಿ ಸಿನಿಮಾ ಮೂಡಿ ಬಂದಿದೆ. ಈ ಚಿತ್ರದಿಂದ ರಾಜ್ಕುಮಾರ್ ಕುಟುಂಬ ಕುಡಿ ವಿನಯ್ ಗೆಲುವಿನ ನಗೆ ಬೀರಿದ್ದಾರೆ. ಇತ್ತೀಚೆಗೆ ಸಿನಿಮಾ ರಿಲೀಸ್ ಆಗಿ 25 ದಿನಗಳು ಕಳೆದಿವೆ.
ಸಿಂಪಲ್ ಸುನಿ (Simple Suni) ನಿರ್ದೇಶನದ ‘ಒಂದು ಸರಳ ಪ್ರೇಮಕಥೆ’ ಸಿನಿಮಾ ಸೂಪರ್ ಹಿಟ್ ಆಗಿದೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇತ್ತು. ಆ ನಿರೀಕ್ಷೆಯನ್ನು ಮೀರಿ ಸಿನಿಮಾ ಮೂಡಿ ಬಂದಿದೆ. ಈ ಚಿತ್ರದಿಂದ ರಾಜ್ಕುಮಾರ್ ಕುಟುಂಬ ಕುಡಿ ವಿನಯ್ ಅವರು ಗೆಲುವಿನ ನಗೆ ಬೀರಿದ್ದಾರೆ. ಇತ್ತೀಚೆಗೆ ಸಿನಿಮಾ ರಿಲೀಸ್ ಆಗಿ 25 ದಿನಗಳು ಕಳೆದಿವೆ. ಈ ವೇಳೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಆಗ 100 ದಿನದ ಕಾನ್ಸೆಪ್ಟ್ ಬಗ್ಗೆ ಮಾತನಾಡಿದ್ದಾರೆ ಸುನಿ. ಮೊದಲೆಲ್ಲ ಸಿನಿಮಾ 100 ದಿನ ಓಡುತ್ತಿತ್ತು. ಆದರೆ, ಈಗ ಟ್ರೆಂಡ್ ಬದಲಾಗಿದೆ. ‘100 ದಿನ ಅನ್ನೋ ಕಾನ್ಸೆಪ್ಟ್ನ ಬಿಟ್ಟುಬಿಡಬೇಕು. ನಿರ್ಮಾಪಕರು 50 ದಿನಕ್ಕೆ ಸಿನಿಮಾನ ಒಟಿಟಿಗೆ ಮಾರಿ ಇರುತ್ತಾರೆ’ ಎಂದಿದ್ದಾರೆ ಅವರು.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Loading...
Unable to load recommendations.
Follow Us
