‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ

Updated on: Jun 19, 2026 | 10:07 PM

ಇತ್ತೀಚೆಗೆ ‘ಮೋಡ ಕವಿದ ವಾತಾವರಣ’ ಸಿನಿಮಾದ ಸುದ್ದಿಗೋಷ್ಠಿ ನಡೆಯಿತು. ವೇದಿಕೆಯಲ್ಲಿ ಮಾತನಾಡಿದ ಚಿತ್ರತಂಡದವರು ಸಿನಿಮಾದ ವಿಶೇಷತೆಗಳನ್ನು ಹಂಚಿಕೊಂಡರು. ಸಿನಿಮಾದಲ್ಲಿ ನಟಿಸಿದ ಅನುಭವವನ್ನು ಮೋಕ್ಷಾ ಕುಶಾಲ್, ಸಾತ್ವಿಕಾ ಮತ್ತು ಶೀಲಮ್ ಅವರು ವಿವರಿಸಿದರು. ಸುದ್ದಿಗೋಷ್ಠಿಯ ವಿಡಿಯೋ ಇಲ್ಲಿದೆ ನೋಡಿ. ಜೂನ್ 26ಕ್ಕೆ ಈ ಸಿನಿಮಾ ಬಿಡುಗಡೆ ಆಗಲಿದೆ.

ಹೊಸ ನಟ ಶೀಲಮ್ ಅವರು ಹೀರೋ ಆಗಿ ಅಭಿನಯಿಸಿರುವ ‘ಮೋಡ ಕವಿದ ವಾತಾವರಣ’ (Moda Kavida Vaatavarana) ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಜೂನ್ 26ರಂದು ಈ ಚಿತ್ರ ಬಿಡುಗಡೆ ಆಗಲಿದೆ. ಸಿಂಪಲ್ ಸುನಿ ಅವರು ನಿರ್ದೇಶನ ಮಾಡಿದ ಈ ಸಿನಿಮಾದಲ್ಲಿ ಶೀಲಂ ಜೊತೆ ಸಾತ್ವಿಕಾ, ಮೋಕ್ಷಾ ಕುಶಾಲ್ ಅವರು ಕೂಡ ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ‘ರಾಮ್‌ ಮೂವೀಸ್’ ಮೂಲಕ ಈ ಸಿನಿಮಾ ನಿರ್ಮಾಣ ಆಗಿದೆ. ಮೈಸೂರು ರಮೇಶ್, ಶ್ರೀರಂಗರಾಜು, ಲೋಕೇಶ್ ಬೆಳವಾಡಿ, ಗೋವಾ ರಮೇಶ್ ನಿರ್ಮಾಣ ಮಾಡಿದ್ದಾರೆ. ಇತ್ತೀಚೆಗೆ ಈ ಸಿನಿಮಾದ ಸುದ್ದಿಗೋಷ್ಠಿ ನಡೆಯಿತು. ವೇದಿಕೆಯಲ್ಲಿ ಮಾತನಾಡಿದ ಚಿತ್ರತಂಡದವರು ಸಿನಿಮಾದ ವಿಶೇಷತೆಗಳನ್ನು ಹಂಚಿಕೊಂಡರು. ಸಿನಿಮಾದಲ್ಲಿ ನಟಿಸಿದ ಅನುಭವವನ್ನು ಮೋಕ್ಷಾ ಕುಶಾಲ್, ಸಾತ್ವಿಕಾ ಮತ್ತು ಶೀಲಮ್ ಅವರು ವಿವರಿಸಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More