ಕಾವೇರಿ ನೀರು ಹಂಚಿಕೆ ವಿವಾದವನ್ನು ಈಗ ಕೋರ್ಟ್ ಹೊರಗಡೆ ಬಗೆಹರಿಸಿಕೊಳ್ಳುವುದು ಸಾಧ್ಯವಿಲ್ಲ: ತೇಜಸ್ವೀ ಸೂರ್ಯ, ಸಂಸದ

ಪ್ರಾಧಿಕಾರದ ಮುಂದೆ ಕರ್ನಾಟಕ ಸರ್ಕಾರ; ರಾಜ್ಯ ಎದುರಿಸುತ್ತಿರುವ ಸಂಕಷ್ಟವನ್ನು ಸಮರ್ಪಕವಾಗಿ ವಿವರಿಸದ ಕಾರಣ ಮತ್ತು ಸರ್ಕಾರಕ್ಕೆ ರಾಜ್ಯದ ಜನತೆಯನ್ನು ಸಂತುಷ್ಟವಾಗಿಡುವುದಕ್ಕಿಂತ ಕಾಂಗ್ರೆಸ್ ನೇತೃತ್ವದ ಇಂಡಿಯ ಮೈತ್ರಿಕೂಟದ ಭಾಗವಾಗಿರುವ ಡಿಎಮ್ ಕೆ ಸರ್ಕಾರವನ್ನು ಸಂತುಷ್ಟಪಡಿಸುವುದು ಹೆಚ್ಚು ಮುಖ್ಯವಾಗಿರುವುದರಿಂದ ಈ ಸ್ಥಿತಿ ನಿರ್ಮಾಣವಾಗಿದೆ ಎಂದು ತೇಜಸ್ವೀ ಸೂರ್ಯ ಹೇಳಿದರು.

ಕಾವೇರಿ ನೀರು ಹಂಚಿಕೆ ವಿವಾದವನ್ನು ಈಗ ಕೋರ್ಟ್ ಹೊರಗಡೆ ಬಗೆಹರಿಸಿಕೊಳ್ಳುವುದು ಸಾಧ್ಯವಿಲ್ಲ: ತೇಜಸ್ವೀ ಸೂರ್ಯ, ಸಂಸದ
|

Updated on: Sep 27, 2023 | 4:58 PM

ಬೆಂಗಳೂರು: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (CWMA) ಮುಂದೆ ವಸ್ತುಸ್ಥಿತಿ ಮಂಡಿಸುವಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ (Congress government) ಸಂಪೂರ್ಣವಾಗಿ ವಿಫಲವಾಗಿದೆ ಎಂದು ಸಂಸದ ತೇಜಸ್ವೀ ಸೂರ್ಯ (Tejasvi Surya) ಹೇಳುತ್ತಾರೆ. ನಗರದಲ್ಲಿಂದು ಟಿವಿ9 ಕನ್ನಡ ವಾಹಿನಿಯ ವರದಿಗಾರನೊಂದಿಗೆ ಮಾತಾಡಿದ ಸೂರ್ಯ, ನೀರು ಹಂಚಿಕೆ ವಿವಾದವನ್ನು ಈಗ ಕೋರ್ಟ್ ಹೊರಗಡೆ ಇತ್ಯರ್ಥ ಮಾಡಿಕೊಳ್ಳುವುದು ಸಾಧ್ಯವಿಲ್ಲ ಯಾಕೆಂದರೆ ವಿವಾದವನ್ನು ಬಗೆಹರಿಸಲೆಂದೇ ಸುಪ್ರೀಮ್ ಕೋರ್ಟ್ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವನ್ನು ರಚಿಸಿದೆ, ಆದರೆ ಸಮಸ್ಯೆಯೆಂದರೆ ಪ್ರಾಧಿಕಾರದ ಮುಂದೆ ಕರ್ನಾಟಕ ಸರ್ಕಾರ; ರಾಜ್ಯ ಎದುರಿಸುತ್ತಿರುವ ಸಂಕಷ್ಟವನ್ನು ಸಮರ್ಪಕವಾಗಿ ವಿವರಿಸದ ಕಾರಣ ಮತ್ತು ಸರ್ಕಾರಕ್ಕೆ ರಾಜ್ಯದ ಜನತೆಯನ್ನು ಸಂತುಷ್ಟವಾಗಿಡುವುದಕ್ಕಿಂತ ಕಾಂಗ್ರೆಸ್ ನೇತೃತ್ವದ ಇಂಡಿಯ ಮೈತ್ರಿಕೂಟದ ಭಾಗವಾಗಿರುವ ಡಿಎಮ್ ಕೆ ಸರ್ಕಾರವನ್ನು ಸಂತುಷ್ಟಪಡಿಸುವುದು ಹೆಚ್ಚು ಮುಖ್ಯವಾಗಿರುವುದರಿಂದ ಈ ಸ್ಥಿತಿ ನಿರ್ಮಾಣವಾಗಿದೆ ಎಂದು ತೇಜಸ್ವೀ ಸೂರ್ಯ ಹೇಳಿದರು.

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಜೊತೆ ನಡೆದ ಸಭೆಯಲ್ಲಿ ಕರ್ನಾಟಕದ ಸದಸ್ಯರು ರಾಜ್ಯ ಸರ್ಕಾರದ ಪರವಾಗಿ ಮಾತಾಡಿದ್ದಾರೆ, ಮಿನಿಟ್ಸ್ ಆಫ್ ದಿ ಮೀಟಿಂಗ್ ತೆಗೆಸಿ ನೋಡಿದರೆ ಅದು ಗೊತ್ತಾಗುತ್ತದೆ. ಸರ್ವಪಕ್ಷ ಸಭೆ ಕರೆದಾಗ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಸರ್ಕಾರದ ಜತೆ ಧ್ವನಿಗೂಡಿಸಿದ್ದಕ್ಕೆ ಕೃತಜ್ಞತೆ ಸಲ್ಲಿಸುವ ರಾಜ್ಯಸರ್ಕಾರದ ಪ್ರತಿನಿಧಿಗಳು ಮಾಧ್ಯಮದವರ ಮುಂದೆ ಸಂಸದರು ರಾಜ್ಯದ ಪರವಾಗಿ ಮಾತಾಡುತ್ತಿಲ್ಲ ಅಂತ ದೂರುತ್ತಾರೆ ಎಂದು ತೇಜಸ್ವೀ ಸೂರ್ಯ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​