ಬೆಂಗಳೂರು: ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿಯ ಹಿರಿಯ ನಾಯಕ ಎಸ್ ಎಂ ಕೃಷ್ಣ (SM Krishna) ಅವರು ಪಕ್ಷದ ಪ್ರಮುಖ ವೇದಿಕೆಗಳಲ್ಲಿ ತಮ್ಮನ್ನು ಕಡೆಗಣಿಸಲಾಗುತ್ತಿರುವ ಸಂಗತಿಯಿಂದ ಬಹಳ ಬೇಜಾರುಗೊಂಡಿದ್ದಾರೆ ಅನ್ನೋದು ಅವರ ಮಾತುಗಳಿಂದ ಸ್ಪಷ್ಟವಾಗುತ್ತದೆ. ಬೆಂಗಳೂರಲ್ಲಿ ಇಂದು ಮಾಧ್ಯಮದವರು ಒಕ್ಕಲಿಗ (Vokkaliga) ಮೀಸಲಾತಿ ಕುರಿತು ಸರ್ಕಾರಕ್ಕೆ ಏನು ಸಲಹೆ ನೀಡಲು ಬಯಸುತ್ತೀರಿ ಅಂತ ಕೇಳಿದಾಗ, ‘ಅವರು ನನ್ನನ್ನು ಸಂಪರ್ಕಿಸಿ ಸಲಹೆ ಕೇಳಿದರೆ ಮಾತ್ರ ಸಲಹೆ ನೀಡುತ್ತೇನೆ, ನಾನಾಗಿ ಮೇಲೆ ಬಿದ್ದು ನೀಡುವುದಿಲ್ಲ’ ಎಂದು ಖಡಕ್ಕಾಗಿ ಉತ್ತರಿಸಿದರು. ಹಾಗೆಯೇ, ಹಳೆ ಮೈಸೂರು ಭಾಗದಲ್ಲಿ ನಡೆಯುತ್ತಿರುವ ಕಾರ್ಯಕ್ರಮಗಳಿಗೂ ಅವರನ್ನು ಕಡೆಗಣಿಸಲಾಗುತ್ತಿರುವ ಬಗ್ಗೆ ಮಾತಾಡಿ, ‘ನಾನೇ ರಾಜಕೀಯದಿಂದ ನಿವೃತ್ತನಾಗುತ್ತಿರಬೇಕಾದರೆ (retire) ಕಡೆಗಣಿಸುವ ಪ್ರಶ್ನೆ ಎಲ್ಲಿ ಉದ್ಭವಿಸುತ್ತದೆ’ ಅಂತ ಮಾರ್ಮಿಕವಾಗಿ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ