ಸೂಕ್ತ ಅಭ್ಯರ್ಥಿ ಇಲ್ಲದ ಕಾರಣ ಅನಿತಾ ಕುಮಾರಸ್ವಾಮಿಯವರನ್ನು ಸ್ಪರ್ಧೆಗಿಳಿಸಲಾಗಿತ್ತು: ಕುಮಾರಸ್ವಾಮಿ
ಕಾಂಗ್ರೆಸ್ ನಾಯಕರು ನೀಡುತ್ತಿರುವ ಹೇಳಿಕೆಗಳನ್ನು ಗಮನಿಸುತ್ತಿರುವುದಾಗಿ ಹೇಳಿದ ಕುಮಾರಸ್ವಾಮಿ, ಅವರು ತನ್ನನ್ನು ಕೆಣಕುವ ಮಾತುಗಳನ್ನಾಡುತ್ತಿದ್ದಾರೆ, ಅವರಿಗೆ ಉತ್ತರಿಸುವ ಗೋಜಿಗೆ ತಾನು ಹೋಗುವುದಿಲ್ಲ, ಎಲ್ಲದಕ್ಕೂ ಚನ್ನಪಟ್ಟಣದ ಜನತೆ ಮತ್ತು ಕಾಲವೇ ಉತ್ತರ ನೀಡಲಿದೆ ಎಂದು ಹೇಳಿದರು.
ಬೆಂಗಳೂರು: ಯದುವೀರ್ ಕೃಷ್ಣದತ್ ಒಡೆಯರ್ ಇಂದು ಚನ್ನಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿ ಪರ ಪ್ರಚಾರ ಮಾಡಲು ಆಗಮಿಸುತ್ತಿರುವುದಕ್ಕಾಗಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಯವರು ಕೃತಜ್ಞತೆ ಸಲ್ಲಿಸಿದರು. ಅವರು ತಾವಾಗಿಯೇ ಸಮಯ ಮಾಡಿಕೊಂಡು ಚನ್ನಪಟ್ಟಣಕ್ಕೆ ಬರುತ್ತಿದ್ದಾರೆ, ಅವರಿಗೆ ರಾಮನಗರ ಜಿಲ್ಲೆಯಲ್ಲಿ ಸಾಕಷ್ಟು ಅಭಿಮಾನಿಗಳಿದ್ದಾರೆ, ಅವರೊಂದಿಗೆ ಇವತ್ತು 8-10 ತಾಲೂಕುಗಳಲ್ಲಿ ಪ್ರಚಾರಕ್ಕೆ ಹೋಗುತ್ತಿರುವೆನೆಂದು ಕುಮಾರಸ್ವಾಮಿ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ನಿಖಿಲ್ನನ್ನು ಜನರು ಅಭಿಮನ್ಯು ಮಾಡುವುದಿಲ್ಲ, ಅರ್ಜುನ ಮಾಡುತ್ತಾರೆ ಎಂದ ಹೆಚ್ಡಿ ಕುಮಾರಸ್ವಾಮಿ