ಯೋಗೇಶ್ವರ್ ಪ್ರಭಾವಿ ನಾಯಕ ಕಾಂಗ್ರೆಸ್​ಗೆ ಬಂದರೆ ಪಕ್ಷಕ್ಕೆ ಅನುಕೂಲ: ಹೆಚ್​ಸಿ ಬಾಲಕೃಷ್ಣ

ಅರುಣ್​ ಕುಮಾರ್​ ಬೆಳ್ಳಿ

Updated on: Oct 22, 2024 | 3:35 PM

ಡಿಕೆ ಸುರೇಶ್ ಚನ್ನಪಟ್ಟಣದಿಂದ ಸ್ಪರ್ಧಿಸುವುದಿಲ್ಲ, ಅವರು ಚುನಾವಣಾ ರಾಜಕೀಯದಿಂದ ದೂರವುಳಿಯಲು ನಿರ್ಧರಿಸಿದ್ದಾರೆ, ಅವರು ಸ್ಪರ್ಧಿಸುವುದು ನಿಜವಾಗಿದ್ದರೆ ಇಷ್ಟೊತ್ತಿಗಾಗಲೇ ಅವರ ಹೆಸರಿನ ಆಧಿಕೃತ ಘೋಷಣೆಯಾಗಿರುತಿತ್ತು ಎಂದು ಶಾಸಕ ಬಾಲಕೃಷ್ಣ ಹೇಳಿದರು.

ಬೆಂಗಳೂರು: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಕಾಂಗ್ರೆಸ್ ಶಾಸಕ ಹೆಚ್ ಸಿ ಬಾಲಕೃಷ್ಣ, ಬಿಜೆಪಿ ನಾಯಕ ಸಿಪಿ ಯೋಗೇಶ್ವರ್ ಕಾಂಗ್ರೆಸ್ ಪಕ್ಷಕ್ಕೆ ಬರೋದಾದ್ರೆ ಸ್ವಾಗತ, ಅವರೊಬ್ಬ ಪ್ರಭಾವಿ ನಾಯಕನಾಗಿರುವುದರಿಂದ ಪಕ್ಷಕ್ಕೆ ಒಳ್ಳೆಯದಾಗುತ್ತದೆ, ಹಾಗಂತ ಕಾಂಗ್ರೆಸ್ ಪಕ್ಷ ದುರ್ಬಲವೇನೂ ಅಲ್ಲ, ಅವರು ಬರಲಿ ಬಿಡಲಿ ಚನ್ನಪಟ್ಟಣದಲ್ಲಿ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲೋದಂತೂ ನಿಶ್ಚಿತ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಚನ್ನಪಟ್ಟಣ ಅಖಾಡದಲ್ಲಿ ಕಾಂಗ್ರೆಸ್ ಮಾಸ್ಟರ್ ಪ್ಲ್ಯಾನ್: ‘ಕೈ’ ತಂತ್ರಗಳು ಹೀಗಿವೆ ನೋಡಿ

Published on: Oct 22, 2024 01:30 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.