AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕ ಹಂಪನಗೌಡ ಬಾದರ್ಲಿಗೆ ಸಚಿವ ಸ್ಥಾನ ಸಿಗಲಿ ಎಂದು ದೇವರ ಮೊರೆ ಹೋದ ಅಭಿಮಾನಿಗಳು

ಶಾಸಕ ಹಂಪನಗೌಡ ಬಾದರ್ಲಿಗೆ ಸಚಿವ ಸ್ಥಾನ ಸಿಗಲಿ ಎಂದು ದೇವರ ಮೊರೆ ಹೋದ ಅಭಿಮಾನಿಗಳು

ರಮೇಶ್ ಬಿ. ಜವಳಗೇರಾ
| Updated By: Rakesh Nayak Manchi|

Updated on:May 25, 2023 | 7:27 PM

Share

ಶಾಸಕ ಹಂಪನಗೌಡ ಬಾದರ್ಲಿಗೆ ಸಚಿವ ಸ್ಥಾನ ಸಿಗಲಿ ಎಂದು ರಾಯಚೂರು ಜಿಲ್ಲೆ ಸಿಂಧನೂರು ತಾಲ್ಲೂಕಿನ ಹೊಸಳ್ಳಿ ಇಜೆ ಗ್ರಾಮದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಅಲ್ಲದೇ 101 ತೆಂಗಿನಕಾಯಿ ಹರಕೆ ತೀರಿಸಿದ್ದಾರೆ.

ರಾಯಚೂರು:  ಮೊದಲ ಹಂತದಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮತ್ತು 8 ಸಚಿವರ ಆಯ್ಕೆ ಪ್ರಕ್ರಿಯೆ ಮುಗಿಸಿರುವ ಕಾಂಗ್ರೆಸ್‌ ಇದೀಗ ಎರಡನೇಹಂತದ ಸಚಿವ ಸಂಪುಟ ರಚನೆಗೆ ಕಸರತ್ತು ನಡೆಸಿದೆ. ಹಲವು ಶಾಸಕರು ಸಚಿವ ಸ್ಥಾನಕ್ಕೆ ಭರ್ಜರಿ ಲಾಬಿ ನಡೆಸಿದ್ದಾರೆ. ಮತ್ತೊಂದೆಡೆ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ತಮ್ಮ-ತಮ್ಮ ಬೆಂಬಲಿರಿಗೆ ಸಚಿವ ಸ್ಥಾನ ಕೊಡಿಸಲು ಹೈಕಮಾಂಡ್​ ನಾಯಕರ ಜೊತೆ ಸರ್ಕಸ್ ನಡೆಸುತ್ತಿದ್ದಾರೆ. ಇದರ ಮಧ್ಯೆ ತಮ್ಮ ನಾಯಕರಿಗೆ ಮಂತ್ರಿಭಾಗ್ಯ ಕರುಣಿಸಲಿ ಎಂದು ಅಭಿಮಾನಿಗಳು ದೇವರ ಮೊರೆ ಹೋಗಿದ್ದು, ಪೂಜೆ ಮಾಡಿಸುತ್ತಿದ್ದಾರೆ. ಅದರಂತೆ ಶಾಸಕ ಹಂಪನಗೌಡ ಬಾದರ್ಲಿಗೆ ಸಚಿವ ಸ್ಥಾನ ಸಿಗಲಿ ಎಂದು ರಾಯಚೂರು ಜಿಲ್ಲೆ ಸಿಂಧನೂರು ತಾಲ್ಲೂಕಿನ ಹೊಸಳ್ಳಿ ಇಜೆ ಗ್ರಾಮದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಅಲ್ಲದೇ 101 ತೆಂಗಿನಕಾಯಿ ಹರಕೆ ತೀರಿಸಿದ್ದಾರೆ.

Published on: May 23, 2023 09:19 AM