‘ವಿಡಿಯೋ ಮಾಡೋದು ನಿಲ್ಲಿಸು’; ಡ್ರಗ್ ಪಾರ್ಟಿ ವೇಳೆ ಪೊಲೀಸರಿಗೆ ಗಾಯಕಿ ಮಂಗ್ಲಿ ಆವಾಜ್

Updated on: Jun 11, 2025 | 2:57 PM

ಗಾಯಕಿ ಮಂಗ್ಲಿ ಬರ್ತ್​ಡೇ ಪ್ರಯುಕ್ತ ಆಯೋಜನೆ ಮಾಡಿರೋ ಪಾರ್ಟಿಯಲ್ಲಿ ಡ್ರಗ್ಸ್ ಬಳಕೆ ಖಚಿತವಾಗಿದೆ. ಈ ವಿಚಾರ ಸೆನ್ಸೇಷನ್ ಸೃಷ್ಟಿ ಮಾಡಿದೆ. ನಟಿಯನ್ನು ಈಗಾಗಲೇ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶಾಕಿಂಗ್ ವಿಚಾರ ಎಂದರೆ ಮಂಗ್ಲಿ ಅವರು ಪೊಲೀಸರಿಗೆ ಆವಾಜ್ ಹಾಕಿದ್ದಾರೆ. ಆ ವಿಡಿಯೋ ಇಲ್ಲಿದೆ.

ಖ್ಯಾತ ಗಾಯಕಿ ಮಂಗ್ಲಿ (Mangli) ಬರ್ತ್​ಡೇ ಪಾರ್ಟಿ ಮೇಲೆ ಪೊಲೀಸರು ದಾಳಿ ಮಾಡಿ ಶಾಕ್ ನೀಡಿದ್ದಾರೆ. ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಚೆವೆಲ್ಲಾ ತಾಲೂಕಿನ ಎರ್ಲಪಲ್ಲಿಯಲ್ಲಿನ ರೆಸಾರ್ಟ್​​ನಲ್ಲಿ ಪಾರ್ಟಿ ಆಯೋಜನೆ ಮಾಡಲಾಗಿತ್ತು. ಈ ವೇಳೆ ಗಾಂಜಾ, ವಿದೇಶಿ ಮದ್ಯ ಪತ್ತೆ ಆಗಿದೆ. ಪಾರ್ಟಿಯಲ್ಲಿ ಭಾಗಿಯಾಗಿದ್ದ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವೈದ್ಯಕೀಯ ಪರೀಕ್ಷೆ ವೇಳೆ ಹಲವರು ಮಾದಕ ದ್ರವ್ಯ ಸೇವಿಸಿರೋದು ಪತ್ತೆ ಆಗಿದೆ. ಪಾರ್ಟಿ ವೇಳೆ ಮಂಗ್ಲಿ ಪೊಲೀಸರಿಗೆ ಆವಾಜ್ ಹಾಕಿದ್ದಾರೆ.  ‘ವಿಡಿಯೋ ಚಿತ್ರೀಕರಣ ಮಾಡದಂತೆ’ ಪೊಲೀಸರಿಗೆ ಮಂಗ್ಲಿ ಆವಾಜ್ ಹಾಕಿರೋ ವಿಡಿಯೋ ವೈರಲ್ ಆಗಿದೆ. ಹೀಗಾಗಿ, ಅವರ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ ಕೇಳಿಬಂದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More