ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು

Edited By:

Updated on: Jul 13, 2026 | 7:34 PM

ಮೈಸೂರಿನಲ್ಲಿ ಭಾನುವಾರ (ಜುಲೈ 12) ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಮಾಡಲಾಗಿತ್ತು. ಇಂದು (ಜುಲೈ 13) ಕಾವೇರಿ ನದಿಯಲ್ಲಿ ಅಸ್ಥಿ ವಿಸರ್ಜನೆ ಮಾಡಲಾಗಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿ‌ನ ಗೋಸಾಯ್ ಘಾಟ್​ನಲ್ಲಿ ಜಾನಕಿ ಅವರ ಕುಟುಂಬಸ್ಥರು ಅಸ್ಥಿ ವಿಸರ್ಜನೆ ಮಾಡಿದ್ದಾರೆ.

ಮೈಸೂರಿನಲ್ಲಿ ಭಾನುವಾರ (ಜುಲೈ 12) ಹಿರಿಯ ಗಾಯಕಿ ಎಸ್. ಜಾನಕಿ (S Janaki) ಅವರ ಅಂತ್ಯಕ್ರಿಯೆ ಮಾಡಲಾಗಿತ್ತು. ಇಂದು (ಜುಲೈ 13) ಕಾವೇರಿ ನದಿಯಲ್ಲಿ ಅಸ್ಥಿ ವಿಸರ್ಜನೆ ಮಾಡಲಾಗಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿ‌ನ ಗೋಸಾಯ್ ಘಾಟ್​ನಲ್ಲಿ ಜಾನಕಿ ಅವರ ಕುಟುಂಬಸ್ಥರು ಅಸ್ಥಿ ವಿಸರ್ಜನೆ ಮಾಡಿದ್ದಾರೆ. ಜಾನಕಿ ಮೊಮ್ಮಗಳು ಅಪ್ಸರಾ ಅವರು ವಿಧಿವಿಧಾನ ಪೂಜೆ ನೆರವೇರಿಸಿದರು. ಅರ್ಚಕ ರಮೇಶ್ ಶರ್ಮಾ ನೇತೃತ್ವದಲ್ಲಿ ವಿಧಿವಿಧಾನ ಕಾರ್ಯ ಮಾಡಲಾಗಿದೆ. ಹಲವು ಭಾಷೆಗಳಲ್ಲಿ ಹಾಡಿದ್ದರೂ ಕೂಡ ಜಾನಕಿ ಅವರು ಕರ್ನಾಟಕದ ಬಗ್ಗೆ ವಿಶೇಷ ಪ್ರೀತಿ ಹೊಂದಿದ್ದರು. ಮೈಸೂರಿನಲ್ಲೇ ಅವರ ಸ್ಮಾರಕ ನಿರ್ಮಾಣ ಆಗಬೇಕು ಎಂದು ಹಂಸಲೇಖ ಸೇರಿದಂತೆ ಹಲವರು ಒತ್ತಾಯಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ದಿಲೀಪ್​, ಚೌಡಹಳ್ಳಿ

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸಿದ್ದೇನೆ. ಸಧ್ಯ ಮಂಡ್ಯ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More