ಎಸ್​ಐಆರ್ ಫಾರ್ಮ್-7 ವಿವಾದ: ಪೊಲೀಸರ ಮೇಲೆ ಒತ್ತಡ ಹಾಕ್ತಿರುವ ಸಿಎಂಗೆ ನಾಚಿಕೆಯಾಗಬೇಕು, ಯಡಿಯೂರಪ್ಪ ವಾಗ್ದಾಳಿ

Edited By:

Updated on: Oct 03, 2026 | 12:49 PM

ಎಸ್​ಐಆರ್ ವೇಳೆ ಫಾರ್ಮ್-7 ದುರ್ಬಳಕೆ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರ ವಿರುದ್ಧ FIR ದಾಖಲಾಗಿರುವ ವಿಚಾರವಾಗಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾರ್ಯಕರ್ತರಿಗೆ ಕಿರುಕುಳ ನೀಡುವುದನ್ನು ನಿಲ್ಲಿಸಬೇಕು. ಇಲ್ಲವಾದರೆ ರಾಜ್ಯವ್ಯಾಪಿ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಬಿಜೆಪಿ ನಾಯಕರು ಡಿಜಿ&ಐಜಿಪಿ ಸಲೀಂ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.

ಬೆಂಗಳೂರು, ಅಕ್ಟೋಬರ್ 3: ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಆರೋಪಿಸಿದ್ದಾರೆ. ಎಸ್​ಐಆರ್ ವೇಳೆ ಚುನಾವಣಾ ಆಯೋಗದ ಫಾರ್ಮ್-7 ದುರ್ಬಳಕೆ ಆರೋಪದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್​ಐಆರ್ ದಾಖಲಾಗಿರುವ ವಿಚಾರವಾಗಿ ಅವರು ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಯಡಿಯೂರಪ್ಪ, ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡುವುದನ್ನು ಸಹಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಪೊಲೀಸರ ಮೇಲೆ ಒತ್ತಡ ಹೇರಿ ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್​ಐಆರ್ ದಾಖಲಿಸುವ ಕೆಲಸ ನಡೆಯುತ್ತಿದೆ ಎಂದು ಆರೋಪಿಸಿದ ಅವರು, ಮುಖ್ಯಮಂತ್ರಿ ಮೆಚ್ಚಿಸಲು ಪೊಲೀಸರು ಎಫ್​ಐಆರ್ ಹಾಕುತ್ತಿದ್ದಾರೆ ಎಂದು ದೂರಿದ್ದಾರೆ.

ಬಿಜೆಪಿ ನಾಯಕರು ಈಗಾಗಲೇ ಡಿಜಿ&ಐಜಿಪಿ ಸಲೀಂ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದು, ಕಾರ್ಯಕರ್ತರ ವಿರುದ್ಧ FIR ದಾಖಲಿಸುವುದನ್ನು ನಿಲ್ಲಿಸುವಂತೆ ಆಗ್ರಹಿಸಿದ್ದಾರೆ. ಸುಳ್ಳು ಆರೋಪಗಳ ಮೂಲಕ ಕಾರ್ಯಕರ್ತರಿಗೆ ಕಿರುಕುಳ ನೀಡುವುದನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಮನವಿ ಮಾಡಿದ್ದಾರೆ.

‘FIR ಇಲ್ಲಿಗೇ ನಿಲ್ಲಬೇಕು. ಇಲ್ಲದಿದ್ದರೆ ರಾಜ್ಯವ್ಯಾಪಿ ಹೋರಾಟ ಮಾಡುತ್ತೇವೆ’ ಎಂದು ಬಿ.ಎಸ್. ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ. ರಾಜ್ಯವ್ಯಾಪಿ ಹೋರಾಟ ನಡೆಸುವ ಬಗ್ಗೆ ಡಿಜಿಪಿಗೆ ತಿಳಿಸಿದ್ದೇವೆ. ರಾಷ್ಟ್ರೀಯ ಪಕ್ಷವಾಗಿ ಬಿಜೆಪಿ ಸುಮ್ಮನಿರಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಸರಿಯಗಿದ್ದರೆ ಸ್ವೀಕರಿಸಲಿ, ಇಲ್ಲದಿದ್ದರೆ ಬಿಡಲಿ: ಯಡಿಯೂರಪ್ಪ

ಫಾರ್ಮ್-7 ವಿಚಾರವಾಗಿ ಮಾತನಾಡಿದ ಯಡಿಯೂರಪ್ಪ, ಬಿಜೆಪಿ ನೀಡಿರುವ ಫಾರ್ಮ್-7 ಸರಿಯಾಗಿದ್ದರೆ ಒಪ್ಪಿಕೊಳ್ಳಬೇಕು. ಸರಿಯಿಲ್ಲದಿದ್ದರೆ ತಿರಸ್ಕರಿಸಲಿ ಎಂದು ಹೇಳಿದ್ದಾರೆ. ಬಿಜೆಪಿ ಕಾರ್ಯಕರ್ತರ ವಿರುದ್ಧ FIR ದಾಖಲಿಸಿರುವ ಹಿನ್ನೆಲೆಯಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಪ್ರತಿಪಕ್ಷ ನಾಯಕ ಆರ್. ಅಶೋಕ್, ಛಲವಾದಿ ನಾರಾಯಣಸ್ವಾಮಿ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಬಿಜೆಪಿ ನಾಯಕರು ಡಿಜಿ&ಐಜಿಪಿ ಸಲೀಂ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಕಿರಣ್​ ಹನಿಯಡ್ಕ

TV9 ಕನ್ನಡದಲ್ಲಿ ಹಿರಿಯ ರಾಜಕೀಯ ವರದಿಗಾರ. ಮಂಗಳೂರು ವಿಶ್ವವಿದ್ಯಾನಿಲಯದಿಂದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ. 17 ವರ್ಷಗಳಿಂದ ಮಾಧ್ಯಮ ವೃತ್ತಿ. ಮುದ್ರಣ ಮಾಧ್ಯಮದಲ್ಲಿ ಸಬ್ ಎಡಿಟರ್, ವಿದ್ಯುನ್ಮಾನ ಮಾಧ್ಯಮದಲ್ಲಿ ನ್ಯೂಸ್ ಡೆಸ್ಕ್ ಮತ್ತು ರಾಜಕೀಯ ವರದಿಗಾರಿಕೆಯಲ್ಲಿ ಅನುಭವ.

Read More