ಬೆಳಗಾವಿಯಲ್ಲಿ ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ಬುಕ್
ಬೆಳಗಾವಿಯಲ್ಲಿ ಅಲ್ಪಸಂಖ್ಯಾತರ ಮತಗಳನ್ನು ಡಿಲೀಟ್ ಮಾಡುವಂತೆ ಬಿಜೆಪಿ ಶಾಸಕ ಅಭಯ್ ಪಾಟೀಲ್ ಪತ್ರ ಬರೆದಿದ್ದಾರೆ ಎಂದು ಸ್ವತಃ ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ದಾಖಲೆ ಬಿಡುಗಡೆ ಮಾಡಿದ್ದರು. ಇದೀಗ ಮುಸ್ಲಿಂ ಮತಗಳನ್ನು ಡಿಲೀಟ್ ಮಾಡಿಸುತ್ತಿದ್ದ ಎನ್ನುವ ಆರೋಪದ ಮೇಲೆ ಬಿಜೆಪಿ ಮುಖಂಡನ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಬೆಳಗಾವಿ, ಅಕ್ಟೋಬರ್ 02) ಕರ್ನಾಟಕದಲ್ಲಿ ಎಸ್ಐಆರ್ ವಿಚಾರದಲ್ಲಿ ಹಲವು ಗೊಂದಲಗಳು ಏರ್ಪಟ್ಟಿವೆ. ಬೇಕಂತಲೇ ಕೆಲವರ ಹೆಸರುಗಳನ್ನು ಡಿಲೀಟ್ ಮಾಡಿಸಲಾಗುತ್ತಿದೆ ಎನ್ನುವ ಆರೋಪ ಕೇಳಿಬಂದಿವೆ. ಇನ್ನು ಇದಕ್ಕೆ ಸಂಬಂಧಿಸಿದಂತೆ ಡಿಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ಫಾರಂ-7 ದುರ್ಬಳಕೆ ಆರೋಪಿಸಿ ಚುನಾವಣೆ ಕಚೇರಿ ಮುಂದೆಯೇ ಧರಣಿ ನಡೆಸಿದೆ. ಇದರ ಬೆನ್ನಲ್ಲೇ ಫಾರಂ-7 ಅರ್ಜಿಗಳ ವಿಚಾರದಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಚುನಾವಣಾ ಆಯೋಗ ಮುಂದಾಗಿದೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಬೆಳಗಾವಿಯಲ್ಲಿ ಅಲ್ಪಸಂಖ್ಯಾತರ ಮತಗಳನ್ನು ಡಿಲೀಟ್ ಮಾಡುವಂತೆ ಬಿಜೆಪಿ ಶಾಸಕ ಅಭಯ್ ಪಾಟೀಲ್ ಪತ್ರ ಬರೆದಿದ್ದಾರೆ ಎಂದು ಸ್ವತಃ ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ದಾಖಲೆ ಬಿಡುಗಡೆ ಮಾಡಿದ್ದರು. ಇದೀಗ ಮುಸ್ಲಿಂ ಮತಗಳನ್ನು ಡಿಲೀಟ್ ಮಾಡಿಸುತ್ತಿದ್ದ ಎನ್ನುವ ಆರೋಪದ ಮೇಲೆ ಬಿಜೆಪಿ ಮುಖಂಡರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್ ಏನು?
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ
ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!

