ಬೆಳಗಾವಿಯಲ್ಲಿ ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ಬುಕ್

Edited By:

Updated on: Oct 02, 2026 | 5:42 PM

ಬೆಳಗಾವಿಯಲ್ಲಿ ಅಲ್ಪಸಂಖ್ಯಾತರ ಮತಗಳನ್ನು ಡಿಲೀಟ್ ಮಾಡುವಂತೆ ಬಿಜೆಪಿ ಶಾಸಕ ಅಭಯ್ ಪಾಟೀಲ್ ಪತ್ರ ಬರೆದಿದ್ದಾರೆ ಎಂದು ಸ್ವತಃ ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ದಾಖಲೆ ಬಿಡುಗಡೆ ಮಾಡಿದ್ದರು. ಇದೀಗ ಮುಸ್ಲಿಂ ಮತಗಳನ್ನು ಡಿಲೀಟ್ ಮಾಡಿಸುತ್ತಿದ್ದ ಎನ್ನುವ ಆರೋಪದ ಮೇಲೆ ಬಿಜೆಪಿ ಮುಖಂಡನ ವಿರುದ್ಧ ಎಫ್​​ಐಆರ್ ದಾಖಲಾಗಿದೆ.

ಬೆಳಗಾವಿ, ಅಕ್ಟೋಬರ್ 02) ಕರ್ನಾಟಕದಲ್ಲಿ ಎಸ್​​ಐಆರ್ ವಿಚಾರದಲ್ಲಿ ಹಲವು ಗೊಂದಲಗಳು ಏರ್ಪಟ್ಟಿವೆ. ಬೇಕಂತಲೇ ಕೆಲವರ ಹೆಸರುಗಳನ್ನು ಡಿಲೀಟ್ ಮಾಡಿಸಲಾಗುತ್ತಿದೆ ಎನ್ನುವ ಆರೋಪ ಕೇಳಿಬಂದಿವೆ. ಇನ್ನು ಇದಕ್ಕೆ ಸಂಬಂಧಿಸಿದಂತೆ ಡಿಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ಫಾರಂ-7 ದುರ್ಬಳಕೆ ಆರೋಪಿಸಿ ಚುನಾವಣೆ ಕಚೇರಿ ಮುಂದೆಯೇ ಧರಣಿ ನಡೆಸಿದೆ. ಇದರ ಬೆನ್ನಲ್ಲೇ ಫಾರಂ-7 ಅರ್ಜಿಗಳ ವಿಚಾರದಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಚುನಾವಣಾ ಆಯೋಗ ಮುಂದಾಗಿದೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಬೆಳಗಾವಿಯಲ್ಲಿ ಅಲ್ಪಸಂಖ್ಯಾತರ ಮತಗಳನ್ನು ಡಿಲೀಟ್ ಮಾಡುವಂತೆ ಬಿಜೆಪಿ ಶಾಸಕ ಅಭಯ್ ಪಾಟೀಲ್ ಪತ್ರ ಬರೆದಿದ್ದಾರೆ ಎಂದು ಸ್ವತಃ ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ದಾಖಲೆ ಬಿಡುಗಡೆ ಮಾಡಿದ್ದರು. ಇದೀಗ ಮುಸ್ಲಿಂ ಮತಗಳನ್ನು ಡಿಲೀಟ್ ಮಾಡಿಸುತ್ತಿದ್ದ ಎನ್ನುವ ಆರೋಪದ ಮೇಲೆ ಬಿಜೆಪಿ ಮುಖಂಡರ ವಿರುದ್ಧ ಎಫ್​​ಐಆರ್ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More