ನಾವು ಮೃತಪಟ್ಟಿಲ್ಲ, ಜೀವಂತವಾಗಿದ್ದೇವೆ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ್ದ ಯತ್ನಾಳ್ ವಿರುದ್ಧ ಕ್ರಮಕ್ಕೆ ಆಗ್ರಹ

Edited By:

Updated on: Oct 04, 2026 | 2:59 PM

ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್​​ಐಆರ್​​ನಲ್ಲಿ ಗೊಂದಲಗಳು ಉದ್ಭವಿಸಿದ್ದು, SIR ವೇಳೆ ಚುನಾವಣಾ ಆಯೋಗದ ಫಾರ್ಮ್-7 ದುರ್ಬಳಕೆ ಆರೋಪ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ಸಂಬಂಧ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ನಡುವೆ ಆರೋಪ ಪ್ರತ್ಯಾರೋಪಗಳು ನಡೆದಿದ್ದು. ಇದರ ಮಧ್ಯೆ ವಿಜಯಪುರಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ , ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿ ಪೇಚೆಗೆ ಸಿಲುಕಿದ್ದಾರೆ. ಹೌದು.... ಮೃತಪಟ್ಟವರ ಹೆಸರು ಮತದಾರರ ಪಟ್ಟಿಯಲ್ಲಿದೆ ಎಂದು ಯತ್ನಾಳ್, ಸೆ.30ರಂದು 8 ಮತದಾರರ ಮರಣ ಪ್ರಮಾಣ ಪತ್ರ ಪ್ರದರ್ಶಿಸಿ ಆರೋಪಿಸಿದ್ದರು. ಆದ್ರೆ, ಇದೀಗ ಆ ಎಂಟು ಮತದಾರರು ಪ್ರತ್ಯಕ್ಷರಾಗಿದ್ದು, ನಾವು ಮೃತಪಟ್ಟಿಲ್ಲ, ಜೀವಂತವಾಗಿದ್ದೇವೆ ಎಂದು ಜಿಲ್ಲಾಧಿಕಾರಿ ಮುಂದೆ ಹಾಜರಾಗಿದ್ದಾರೆ.

ವಿಜಯಪುರ, (ಅಕ್ಟೋಬರ್ 04): ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್​​ಐಆರ್​​ನಲ್ಲಿ ಗೊಂದಲಗಳು ಉದ್ಭವಿಸಿದ್ದು, SIR ವೇಳೆ ಚುನಾವಣಾ ಆಯೋಗದ ಫಾರ್ಮ್-7 ದುರ್ಬಳಕೆ ಆರೋಪ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ಸಂಬಂಧ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ನಡುವೆ ಆರೋಪ ಪ್ರತ್ಯಾರೋಪಗಳು ನಡೆದಿದ್ದು. ಇದರ ಮಧ್ಯೆ ವಿಜಯಪುರಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ , ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿ ಪೇಚೆಗೆ ಸಿಲುಕಿದ್ದಾರೆ. ಹೌದು…. ಮೃತಪಟ್ಟವರ ಹೆಸರು ಮತದಾರರ ಪಟ್ಟಿಯಲ್ಲಿದೆ ಎಂದು ಯತ್ನಾಳ್, ಸೆ.30ರಂದು 8 ಮತದಾರರ ಮರಣ ಪ್ರಮಾಣ ಪತ್ರ ಪ್ರದರ್ಶಿಸಿ ಆರೋಪಿಸಿದ್ದರು. ಆದ್ರೆ, ಇದೀಗ ಆ ಎಂಟು ಮತದಾರರು ಪ್ರತ್ಯಕ್ಷರಾಗಿದ್ದು, ನಾವು ಮೃತಪಟ್ಟಿಲ್ಲ, ಜೀವಂತವಾಗಿದ್ದೇವೆ ಎಂದು ಜಿಲ್ಲಾಧಿಕಾರಿ ಮುಂದೆ ಹಾಜರಾಗಿದ್ದಾರೆ.

ನಮ್ಮ ಡೆತ್ ಸರ್ಟಿಫಿಕೇಟ್ ಶಾಸಕ ಯತ್ನಾಳ್‌ಗೆ ಹೇಗೆ ಸಿಕ್ಕಿತು? ಮತದಾರರ ಪಟ್ಟಿಯಿಂದ ಹೆಸರು ತೆಗೆಸಲು ಹುನ್ನಾರ ನಡೆದಿದೆ . ಜೀವಂತ ವ್ಯಕ್ತಿಗಳ ಮರಣ ಪತ್ರ ನೀಡಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದರು. ಪಾಲಿಕೆಯಿಂದ ನೀಡಿದ ಮರಣ ಪ್ರಮಾಣ ಪತ್ರ ನಕಲಿಯೋ? ಅಸಲಿಯೋ? ಪಾಲಿಕೆ ಸಿಬ್ಬಂದಿಯಿಂದಲೇ ಗೋಲ್ಮಾಲ್ ನಡೆದಿದೆಯೇ ಎಂಬ ಅನುಮಾನ ವ್ಯಕ್ತವಾಗಿದೆ. ಜೀವಂತ ವ್ಯಕ್ತಿಗಳ ಡೆತ್ ಸರ್ಟಿಫಿಕೇಟ್ ನೀಡಿದವರ ಪತ್ತೆಗೆ ಆಗ್ರಹಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅಶೋಕ ಯಡಳ್ಳಿ, ವಿಜಯಪುರ

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More