AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು ಶಿರಾದಲ್ಲಿ ಸಾಲಕ್ಕೆ ಚಹಾ ನೀಡಿಲ್ಲವೆಂದು ಬಿಹಾರದ ಯುವಕರ ಅಟ್ಟಹಾಸ: ಜೆಸಿಬಿಯಿಂದ ಅಂಗಡಿ ಧ್ವಂಸಕ್ಕೆ ಯತ್ನ

ತುಮಕೂರು ಶಿರಾದಲ್ಲಿ ಸಾಲಕ್ಕೆ ಚಹಾ ನೀಡಿಲ್ಲವೆಂದು ಬಿಹಾರದ ಯುವಕರ ಅಟ್ಟಹಾಸ: ಜೆಸಿಬಿಯಿಂದ ಅಂಗಡಿ ಧ್ವಂಸಕ್ಕೆ ಯತ್ನ

ಜಗದೀಶ ಬಿ.
| Edited By: |

Updated on: Oct 22, 2026 | 2:18 PM

Share

ತುಮಕೂರಿನ ಶಿರಾದಲ್ಲಿ ಚಹಾ ಸಾಲ ನೀಡುವ ವಿಚಾರಕ್ಕೆ ಭಾರೀ ಹೈಡ್ರಾಮಾ ನಡೆದಿದೆ. ಬಿಹಾರ ಮೂಲದ ಯುವಕರ ಗುಂಪೊಂದು, ಚಹಾ ಅಂಗಡಿ ಮಾಲೀಕ ಸಾಲ ಕೊಡಲಿಲ್ಲ ಎಂದು ಆಕ್ರೋಶಗೊಂಡು, ಅಂಗಡಿಯನ್ನೇ ಜೆಸಿಬಿಯಿಂದ ಧ್ವಂಸಗೊಳಿಸುವುದಾಗಿ ಬೆದರಿಕೆ ಒಡ್ಡಿದೆ. ಸ್ಥಳಕ್ಕೆ ಆಗಮಿಸಿದ ಕರ್ನಾಟಕ ರಕ್ಷಣಾ ವೇದಿಕೆ ಮಧ್ಯಪ್ರವೇಶಿಸಿದ್ದು, ಶಿರಾನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ತುಮಕೂರು, ಅಕ್ಟೋಬರ್ 22: ತುಮಕೂರು ಜಿಲ್ಲೆಯ ಶಿರಾದಲ್ಲಿ, ಸಾಲ ನೀಡದ ಕಾರಣಕ್ಕೆ ಟೀ ಅಂಗಡಿಯೊಂದನ್ನು ಜೆಸಿಬಿಯಿಂದ ಧ್ವಂಸಗೊಳಿಸುವುದಾಗಿ ಬೆದರಿಕೆ ಒಡ್ಡಿದ ಘಟನೆ ನಡೆದಿದೆ. ಬುಧವಾರ ರಾತ್ರಿ ಶಿರಾದ ಕೈಗಾರಿಕಾ ಪ್ರದೇಶದಲ್ಲಿ ಬಿಹಾರ ಮೂಲದ ಯುವಕರ ಗುಂಪೊಂದು ಈ ಅಟ್ಟಹಾಸ ಮೆರೆದಿದೆ. ಚಹಾ ಸಾಲ ನೀಡಲು ಅಂಗಡಿ ಮಾಲೀಕ ನಿರಾಕರಿಸಿದಾಗ, ಗ್ರಾಹಕರೊಂದಿಗೆ ಜಗಳ ಪ್ರಾರಂಭವಾಗಿದೆ. ಈ ಜಗಳ ತಾರಕಕ್ಕೇರಿ, ರೊಚ್ಚಿಗೆದ್ದ ಯುವಕರು ಜೆಸಿಬಿ ತಂದು ಅಂಗಡಿಯನ್ನು ನೆಲಸಮಗೊಳಿಸುವುದಾಗಿ ಬೆದರಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದ್ದು, ವಿಷಯ ತಿಳಿದ ಕರ್ನಾಟಕ ರಕ್ಷಣಾ ವೇದಿಕೆಯ ಸದಸ್ಯರು ಟೀ ಅಂಗಡಿ ಮಾಲೀಕರ ನೆರವಿಗೆ ಧಾವಿಸಿದ್ದಾರೆ. ನಂತರ ಈ ಸಂಬಂಧ ಶಿರಾನಗರ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದು, ಘಟನೆಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಈ ಘಟನೆ ಬಿಹಾರ ಮೂಲದ ಯುವಕರ ದುರ್ವರ್ತನೆ ಮತ್ತು ಕಾನೂನುಬಾಹಿರ ಚಟುವಟಿಕೆಗಳ ಬಗ್ಗೆ ಸ್ಥಳೀಯರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಜಗದೀಶ ಬಿ.
ಜಗದೀಶ ಬಿ.

ಜಗದೀಶ್​ ಬಸವರಾಜು ಟಿವಿ9 ಕನ್ನಡದ ಜಿಲ್ಲಾ ವರದಿಗಾರರಾಗಿದ್ದಾರೆ. ಪ್ರಸ್ತುತ ಅವರು ತುಮಕುರು ಜಿಲ್ಲಾ ಸುದ್ದಿಗಳ ವರದಿ ಮಾಡುತ್ತಿದ್ದಾರೆ. ಹುಟ್ಟಿದ್ದು, ಬೆಳೆದಿದ್ದು ಬೆಂಗಳೂರಿನಲ್ಲಿ. ಪತ್ರಿಕೋದ್ಯಮ ಓದಿದ್ದು, ವೃತ್ತಿ ಬದುಕು ಆರಂಭಿಸಿದ್ದು ಕೂಡಾ ಬೆಂಗಳೂರಿನಲ್ಲಿ. ಟಿವಿ9ನಲ್ಲಿ ಎಂಟು ವರ್ಷ ಸಹಿತ ಹತ್ತು ವರ್ಷದ ಕ್ರೈಂ ವರದಿಗಾರಿಕೆಯ ಅನುಭವದ ಜೊತೆ ಸದ್ಯ ೨೦೨೫ರಿಂದ ತುಮಕೂರು ಜಿಲ್ಲಾವರದಿಗಾರನಾಗಿ ಮಾದ್ಯಮದ ವೃತ್ತಿ ಬದುಕು ಮುಂದುವರೆದಿದೆ.

Read More