AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನದಿ ತಿರುವು ವಿರೋಧಿಸಿ ಸಿಎಂ, ಪ್ರಧಾನಿ ಮೋದಿಗೆ ಪತ್ರ ಬರೆದ ಶಿರಸಿಯ ಶಾಲಾ ಮಕ್ಕಳು

ನದಿ ತಿರುವು ವಿರೋಧಿಸಿ ಸಿಎಂ, ಪ್ರಧಾನಿ ಮೋದಿಗೆ ಪತ್ರ ಬರೆದ ಶಿರಸಿಯ ಶಾಲಾ ಮಕ್ಕಳು

ಸುಷ್ಮಾ ಚಕ್ರೆ
|

Updated on: Oct 31, 2026 | 5:14 PM

Share

ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಇಂದು ಬೈರಂಬೇ ಪ್ರೌಢಶಾಲಾ ವಿದ್ಯಾರ್ಥಿಗಳು ಸ್ವಯಂ ಪ್ರೇರಣೆಯಿಂದ ಉತ್ತರ ಕನ್ನಡ ಜಿಲ್ಲೆಯ ನದಿಯು ನದಿತಿರುವ ಯೋಜನೆ, ವಿರೋಧಿಸಿ ಪತ್ರ ಚಳುವಳಿ ಪ್ರಾರಂಭಿಸಿದ್ದಾರೆ. ಸುಮಾರು 200ಕ್ಕೂ ಹೆಚ್ಚು ಪತ್ರಗಳನ್ನು ಅಂಚೆಯ ಮೂಲಕ ರವಾನಿಸಿದ್ದಾರೆ. ರಾಜ್ಯದ ಮುಖ್ಯಮಂತ್ರಿ ಹಾಗೂ ರಾಜ್ಯದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಕನ್ನಡದಲ್ಲಿ ಪತ್ರಗಳನ್ನು ಕಳುಹಿಸಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಹಿಂದಿ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಬೇಡ್ತಿ ನದಿ ತಿರುವು ಯೋಜನೆ ವಿರೋಧಿಸಿ ಪತ್ರ ಕಳಿಸಿದ್ದಾರೆ. ಇದಕ್ಕೆ ಭಾರತೀಯ ಕಿಸಾನ್ ಸಂಘ ಸಂಚಾಲಕ ನರಸಿಂಹಮೂರ್ತಿ ಸಹಕರಿಸಿದರು.

ಶಿರಸಿ, ಅಕ್ಟೋಬರ್ 31: ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಇಂದು ಬೈರಂಬೇ ಪ್ರೌಢಶಾಲಾ ವಿದ್ಯಾರ್ಥಿಗಳು ಸ್ವಯಂ ಪ್ರೇರಣೆಯಿಂದ ಉತ್ತರ ಕನ್ನಡ ಜಿಲ್ಲೆಯ ಬೇಡ್ತಿ ನದಿ ತಿರುವು ಯೋಜನೆ ವಿರೋಧಿಸಿ ಪತ್ರ ಚಳುವಳಿ ಪ್ರಾರಂಭಿಸಿದ್ದಾರೆ. ವಿದ್ಯಾರ್ಥಿಗಳು ಸುಮಾರು 200ಕ್ಕೂ ಹೆಚ್ಚು ಪತ್ರಗಳನ್ನು ಅಂಚೆಯ ಮೂಲಕ ರವಾನಿಸಿದ್ದಾರೆ. ರಾಜ್ಯದ ಮುಖ್ಯಮಂತ್ರಿ ಹಾಗೂ ರಾಜ್ಯದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಕನ್ನಡದಲ್ಲಿ ಪತ್ರಗಳನ್ನು ಕಳುಹಿಸಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಹಿಂದಿ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಬೇಡ್ತಿ ನದಿ ತಿರುವು ಯೋಜನೆ ವಿರೋಧಿಸಿ ಪತ್ರ ಕಳಿಸಿದ್ದಾರೆ. ಇದಕ್ಕೆ ಭಾರತೀಯ ಕಿಸಾನ್ ಸಂಘ ಸಂಚಾಲಕ ನರಸಿಂಹಮೂರ್ತಿ ಸಹಕರಿಸಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More