ಪ್ರಜ್ವಲ್ ವಿಡಿಯೋ ವೈರಲ್ ಪ್ರಕರಣ: ಪ್ರಮುಖರ ಹೆಸರೇ ಚಾರ್ಜ್ಶೀಟ್ನಿಂದ ಮಿಸ್ಸಿಂಗ್?
ಪ್ರಜ್ವಲ್ ರೇವಣ್ಣ ವಿಡಿಯೋ ವೈರಲ್ ಪ್ರಕರಣ ಸಂಬಂಧ ಎಸ್ಐಟಿ ಚಾರ್ಜ್ಶೀಟ್ ಸಲ್ಲಿಕೆಯಾದರೂ, ಮಾಜಿ ಶಾಸಕ ಪ್ರೀತಂ ಗೌಡ ಮತ್ತು ಶ್ರೇಯಸ್ ಪಟೇಲ್ ಅವರಿಗೆ ನೋಟಿಸ್ ನೀಡದಿರುವ ಬಗ್ಗೆ ಪ್ರಶ್ನೆಗಳು ಎದ್ದಿವೆ. ಪ್ರಮುಖ ಆರೋಪಿಗಳನ್ನು ವಿಚಾರಣೆಗೆ ಒಳಪಡಿಸದೆ, ತನಿಖಾಧಿಕಾರಿಗಳ ಕಾರ್ಯವೈಖರಿ ಬಗ್ಗೆ ವಕೀಲ ಹಾಗೂ ಬಿಜೆಪಿ ಮುಖಂಡ ದೇವರಾಜೇಗೌಡ ಆಕ್ಷೇಪ ತೆಗೆದಿದ್ದಾರೆ.
ಹಾಸನ, ಮಾರ್ಚ್ 18: ಪ್ರಜ್ವಲ್ ರೇವಣ್ಣ ವಿಡಿಯೋ ವೈರಲ್ ಪ್ರಕರಣ ಸಂಬಂಧ ಎಸ್ಐಟಿ ಚಾರ್ಜ್ಶೀಟ್ ಬಗ್ಗೆ ವಕೀಲ ಹಾಗೂ ಬಿಜೆಪಿ ಮುಖಂಡ ದೇವರಾಜೇಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಕೇಸ್ನ ಆರನೇ ಆರೋಪಿಯೂ ಆಗಿರುವ ದೇವರಾಜೇಗೌಡ, ಪ್ರಕರಣದಲ್ಲಿ ಯಾರ್ಯಾರು ಇದ್ದಾರೆ ಎಂಬುದು ಜಗತ್ತಿಗೆ ಗೊತ್ತಿದೆ. ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಎಬ್ಬಿಸಿದ ಪ್ರಕರಣ ಇದು. ಪ್ರಮುಖ ಆರೋಪಿ ಸ್ಥಾನದಲ್ಲಿರುವ ಪ್ರೀತಂಗೌಡ, ಡಿ.ಕೆ. ಶಿವಕುಮಾರ್, ಶ್ರೇಯಸ್ ಪಟೇಲ್, ಕ್ವಾಲಿಟಿ ಬಾರ್ ಶರತ್, ಹಲವು ರಾಜಕಾರಣಿಗಳ ಹೆಸರಿಲ್ಲ. ಶಿವಲಿಂಗೇಗೌಡ ಬಹಿರಂಗವಾಗಿ ಹೇಳಿದರೂ ಅವರಿಗೆ ಏಕೆ ನೋಟಿಸ್ ಕೊಡಲಿಲ್ಲ?, ಅಧಿಕಾರಿಗಳು ಕಾಂಗ್ರೆಸ್ ಪಕ್ಷದ ಗುಲಾಮರಾಗಿ ಕೆಲಸ ಮಾಡುತ್ತಿದ್ದಾರೆ. ಪೆನ್ಡ್ರೈವ್ ಹಂಚಿಕೆ ಮಾಡಿದವರ ಹೆಸರೇ ಚಾರ್ಜ್ಶೀಟ್ನಲ್ಲಿ ಇಲ್ಲ. ಹೀಗಾಗಿ ತನಿಖೆ ಮಾಡಿದ ಅಧಿಕಾರಿಗಳನ್ನೇ ತನಿಖೆ ಮಾಡಬೇಕು. ಈ ಬಗ್ಗೆ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಬಿಡದಿ ಟೌನ್ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್ ಶಾಸಕನ ವಿರುದ್ಧವೂ ಎಸ್ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
