ಪ್ರಜ್ವಲ್ ವಿಡಿಯೋ ವೈರಲ್ ಪ್ರಕರಣ: ಪ್ರಮುಖರ ಹೆಸರೇ ಚಾರ್ಜ್​​ಶೀಟ್​​ನಿಂದ ಮಿಸ್ಸಿಂಗ್​​?

Edited By:

Updated on: Mar 18, 2026 | 1:01 PM

ಪ್ರಜ್ವಲ್ ರೇವಣ್ಣ ವಿಡಿಯೋ ವೈರಲ್ ಪ್ರಕರಣ ಸಂಬಂಧ ಎಸ್​ಐಟಿ ಚಾರ್ಜ್​ಶೀಟ್ ಸಲ್ಲಿಕೆಯಾದರೂ, ಮಾಜಿ ಶಾಸಕ ಪ್ರೀತಂ ಗೌಡ ಮತ್ತು ಶ್ರೇಯಸ್ ಪಟೇಲ್ ಅವರಿಗೆ ನೋಟಿಸ್ ನೀಡದಿರುವ ಬಗ್ಗೆ ಪ್ರಶ್ನೆಗಳು ಎದ್ದಿವೆ. ಪ್ರಮುಖ ಆರೋಪಿಗಳನ್ನು ವಿಚಾರಣೆಗೆ ಒಳಪಡಿಸದೆ, ತನಿಖಾಧಿಕಾರಿಗಳ ಕಾರ್ಯವೈಖರಿ ಬಗ್ಗೆ ವಕೀಲ ಹಾಗೂ ಬಿಜೆಪಿ ಮುಖಂಡ ದೇವರಾಜೇಗೌಡ ಆಕ್ಷೇಪ ತೆಗೆದಿದ್ದಾರೆ.

ಹಾಸನ, ಮಾರ್ಚ್​​ 18: ಪ್ರಜ್ವಲ್ ರೇವಣ್ಣ ವಿಡಿಯೋ ವೈರಲ್ ಪ್ರಕರಣ ಸಂಬಂಧ ಎಸ್​ಐಟಿ ಚಾರ್ಜ್​​ಶೀಟ್​​ ಬಗ್ಗೆ ವಕೀಲ ಹಾಗೂ ಬಿಜೆಪಿ ಮುಖಂಡ ದೇವರಾಜೇಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಕೇಸ್​​ನ ಆರನೇ ಆರೋಪಿಯೂ ಆಗಿರುವ ದೇವರಾಜೇಗೌಡ, ಪ್ರಕರಣದಲ್ಲಿ ಯಾರ್ಯಾರು ಇದ್ದಾರೆ ಎಂಬುದು ಜಗತ್ತಿಗೆ ಗೊತ್ತಿದೆ. ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಎಬ್ಬಿಸಿದ ಪ್ರಕರಣ ಇದು. ಪ್ರಮುಖ ಆರೋಪಿ ಸ್ಥಾನದಲ್ಲಿರುವ ಪ್ರೀತಂಗೌಡ, ಡಿ.ಕೆ. ಶಿವಕುಮಾರ್, ಶ್ರೇಯಸ್‌ ಪಟೇಲ್, ಕ್ವಾಲಿಟಿ ಬಾರ್ ಶರತ್, ಹಲವು ರಾಜಕಾರಣಿಗಳ ಹೆಸರಿಲ್ಲ. ಶಿವಲಿಂಗೇಗೌಡ ಬಹಿರಂಗವಾಗಿ ಹೇಳಿದರೂ ಅವರಿಗೆ ಏಕೆ ನೋಟಿಸ್​​ ಕೊಡಲಿಲ್ಲ?, ಅಧಿಕಾರಿಗಳು ಕಾಂಗ್ರೆಸ್ ಪಕ್ಷದ ಗುಲಾಮರಾಗಿ ಕೆಲಸ ಮಾಡುತ್ತಿದ್ದಾರೆ. ಪೆನ್​​ಡ್ರೈವ್​​ ಹಂಚಿಕೆ ಮಾಡಿದವರ ಹೆಸರೇ ಚಾರ್ಜ್​​​ಶೀಟ್​​ನಲ್ಲಿ ಇಲ್ಲ. ಹೀಗಾಗಿ ತನಿಖೆ ಮಾಡಿದ ಅಧಿಕಾರಿಗಳನ್ನೇ ತನಿಖೆ ಮಾಡಬೇಕು. ಈ ಬಗ್ಗೆ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸುತ್ತೇನೆ ಎಂದು  ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ಮಂಜುನಾಥ ಕೆಬಿ

ಮಂಜುನಾಥ ಕೆಬಿ ಪತ್ರಿಕೋದ್ಯಮದಲ್ಲಿ ಕಳೆದ 17 ವರ್ಷಗಳಿಂದ ಸೇವೆ ಮಾಡುತ್ತಿದ್ದೇನೆ. ಕರುನಾಡಿನ ಹೆಮ್ಮೆಯ ಸುದ್ದಿ ವಾಹಿನಿ ಟಿವಿ9 ಕನ್ನಡ ಜೊತೆಗೆ 15ನೇ ವರ್ಷದ ಪಯಣ ನನ್ನದು. ಓದಿದ್ದು, ಮೈಸೂರು ವಿವಿಯಲ್ಲಿ ಕಾನೂನು ಪದವಿ, ಎರಡು ವರ್ಷ ವಕೀಲ ವೃತ್ತಿ ಬಳಿಕ ಮಾಧ್ಯಮ ಕ್ಷೇತ್ರಕ್ಕೆ ಆಗಮಿಸಿ ಟಿವಿ9 ವಾಹಿನಿ ಮೂಲಕ ಸಮಸ್ಯೆಗೆ ಧ್ವನಿಯಾಗಿ ಕಾಯಕ. ಕೊಡಗಿನಲ್ಲಿ ಐದುವರೆ ವರ್ಷ ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದು, ಇದೀಗ ಹಾಸನದ ಹಿರಿಯ ವರದಿಗಾರನಾಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದೇನೆ.

Read More