AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಣಗಿದ ದಾಸವಾಳ ಹೂ ನುಂಗಿದ ಪರಿಣಾಮ ಉಸಿರುಗಟ್ಟಿ 6 ತಿಂಗಳ ಮಗು ಸಾವು

ಒಣಗಿದ ದಾಸವಾಳ ಹೂ ನುಂಗಿದ ಪರಿಣಾಮ ಉಸಿರುಗಟ್ಟಿ 6 ತಿಂಗಳ ಮಗು ಸಾವು

ರಾಮ್​, ಮೈಸೂರು
| Edited By: |

Updated on:Mar 30, 2026 | 12:27 PM

Share

ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ದೊಡ್ಡ ಹೆಜ್ಜೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದೆ. ಆರುವರೆ ತಿಂಗಳ ಮಗು ಚಿನ್ಮಯಿಗೌಡ ಒಣಗಿದ ದಾಸವಾಳ ಹೂವನ್ನು ನುಂಗಿ ಉಸಿರುಗಟ್ಟಿ ಮೃತಪಟ್ಟಿದೆ. ಪೋಷಕರು ಮಗುವನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಕಾರಿಯಾಗದೆ ಮಗು ಸಾವನಪ್ಪಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಮೈಸೂರು, ಮಾರ್ಚ್​​ 30: ಹುಣಸೂರು ತಾಲೂಕಿನ ದೊಡ್ಡ ಹೆಜ್ಜೂರು ಗ್ರಾಮದಲ್ಲಿ ನಡೆದ ದುರಂತ ಘಟನೆಯಲ್ಲಿ ಆರುವರೆ ತಿಂಗಳ ಮಗು ಸಾವನ್ನಪ್ಪಿದೆ. ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳ ಹೂವನ್ನು ಮಗು ಚಿನ್ಮಯಿಗೌಡ ಆಟವಾಡುತ್ತಾ ನುಂಗಿದೆ. ಇದರಿಂದ ಮಗುವಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ. ಪೋಷಕರು ಇದನ್ನು ಗಮನಿಸಿದ ಕೂಡಲೇ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ವೈದ್ಯರ ಚಿಕಿತ್ಸೆ ಫಲಕಾರಿಯಾಗದೆ ಮಗು ಅಸುನೀಗಿದೆ. ಮಗುವಿನ ಗಂಟಲಿನಲ್ಲಿ ಒಣಗಿದ ದಾಸವಾಳ ಹೂವು ಸಿಲುಕಿಕೊಂಡಿದ್ದು ಉಸಿರುಗಟ್ಟುವಿಕೆಗೆ ಕಾರಣವಾಗಿದೆ ಎಂದು ನಂತರ ತಿಳಿದುಬಂದಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Mar 30, 2026 12:24 PM
Follow Us
Ram
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More