Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಅಟ್ಟಹಾಸ: ತುಮಕೂರಿನಲ್ಲಿ 6 ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ವ್ಯಕ್ತಿ ಸಾವು

ಸಾಧು ಶ್ರೀನಾಥ್​
|

Updated on:Apr 26, 2021 | 2:29 PM

ತೀವ್ರ ಉಸಿರಾಟದ ತೊಂದರೆಯಿಂದ ಜಿಲ್ಲಾಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು‌. ಹೆಚ್ಚಿನ ಚಿಕಿತ್ಸೆಗಾಗಿ ನಿನ್ನೆ ಸಂಜೆ ಜಿಲ್ಲಾಸ್ಪತ್ರೆಯಿಂದ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಆಗಿದ್ದರು. ಮಧ್ಯೆ ರಾತ್ರಿ 1.30 ರ ಸುಮಾರಿನಲ್ಲಿ ಸಾವನ್ನಪ್ಪಿದ್ದಾರೆ. ಲಿವರ್​ ಡ್ಯಾಮೇಜ್ ನಿಂದ ಮೃತಪಟ್ಟಿದ್ದಾರೆ ಎಂದು ಖಾಸಗಿ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ತುಮಕೂರಿನಲ್ಲಿಯೂ ಕ್ರೂರಿ ಕೊರೊನಾ ಅಟ್ಟಹಾಸ ನಡೆಸಿದೆ. ತುಮಕೂರು ಜಿಲ್ಲಾಸ್ಪತ್ರೆಯ ಡಯಾಲಿಸಿಸ್ ಸೆಂಟರ್​ನಲ್ಲಿ ಡಯಾಲಿಸಿಸ್ ಸೆಂಟರ್ ಮುಖ್ಯಸ್ಥ ಕೊರೊನಾಗೆ ಬಲಿಯಾಗಿದ್ದಾರೆ. 6 ತಿಂಗಳ ಹಿಂದಷ್ಟೇ ಇವರ ಮದುವೆಯಾಗಿತ್ತು. ತುಮಕೂರು ತಾಲೂಕಿನ ಹೆಬ್ಬೂರು ಗ್ರಾಮದ 27 ವರ್ಷದ ವ್ಯಕ್ತಿ ಸಾವಿಗೀಡಾದವರು. ಕಳೆದ ವಾರ ಸೋಂಕು ತಗುಲಿತ್ತು.

ತೀವ್ರ ಉಸಿರಾಟದ ತೊಂದರೆಯಿಂದ ಜಿಲ್ಲಾಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು‌. ಹೆಚ್ಚಿನ ಚಿಕಿತ್ಸೆಗಾಗಿ ನಿನ್ನೆ ಸಂಜೆ ಜಿಲ್ಲಾಸ್ಪತ್ರೆಯಿಂದ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಆಗಿದ್ದರು. ಮಧ್ಯೆ ರಾತ್ರಿ 1.30 ರ ಸುಮಾರಿನಲ್ಲಿ ಸಾವನ್ನಪ್ಪಿದ್ದಾರೆ. ಲಿವರ್​ ಡ್ಯಾಮೇಜ್ ನಿಂದ ಮೃತಪಟ್ಟಿದ್ದಾರೆ ಎಂದು ಖಾಸಗಿ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. 27 ವರ್ಷದ ವ್ಯಕ್ತಿ ಕೊರೊನಾಗೆ ಬಲಿಯಾಗಿರೋದು ತುಮಕೂರು ಜನರಲ್ಲಿ ಆತಂಕ ತಂದಿದೆ.
(6 months back married person died due to covid 19 in tumkur)

Published on: Apr 26, 2021 02:27 PM