ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ ಸಿಎಂ

| Updated By: ಗಂಗಾಧರ​ ಬ. ಸಾಬೋಜಿ

Updated on: Jan 08, 2025 | 8:30 PM

ಆರು ನಕ್ಸಲರು ಸಿಎಂ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಶರಣಾಗಿದ್ದಾರೆ. ನಕ್ಸಲ್ ಶರಣಾಗತಿ ಮತ್ತು ಪುನರ್ವಸತಿ ಸಮಿತಿಯ ಪ್ರಯತ್ನದ ಫಲವಾಗಿ ಈ ಶರಣಾಗತಿ ಸಾಧ್ಯವಾಗಿದೆ. ಸಿಎಂ ಅವರು ಶರಣಾದ ನಕ್ಸಲರಿಗೆ ಸಂವಿಧಾನದ ಪ್ರತಿಯನ್ನು ನೀಡಿ, ಅವರ ಪುನರ್ವಸತಿಗೆ ಸರ್ಕಾರದ ಬದ್ಧತೆಯನ್ನು ತಿಳಿಸಿದ್ದಾರೆ. ಕರ್ನಾಟಕವನ್ನು ನಕ್ಸಲರ ಮುಕ್ತ ರಾಜ್ಯವನ್ನಾಗಿ ಮಾಡುವ ಗುರಿಯನ್ನು ಸರ್ಕಾರ ಹೊಂದಿದೆ.

ಬೆಂಗಳೂರು, ಜನವರಿ 08: ಕರ್ನಾಟಕ ಇಂದು ಒಂದು ವಿಶೇಷ ಇತಿಹಾಸಕ್ಕೆ ಸಾಕ್ಷಿಯಾಗಿದೆ. ಕರ್ನಾಟಕ ನಕ್ಸಲ್ ಮುಕ್ತ ರಾಜ್ಯವಾಗಿದೆ ನಕ್ಸಲ್ ಚಟುವಟಿಕೆ ನಡೆಸುತ್ತಿದ್ದ ಭರ್ತಿ ಆರು ಜನ. ಮೋಸ್ಟ್ ವಾಟೆಂಡ್ ನಕ್ಸಲರು ಇಂದು ಸಿಎಂ ಸಿದ್ದರಾಮಯ್ಯ (Siddaramaiah) ಸಮುಖದಲ್ಲೇ ಶಸ್ತ್ರ ತ್ಯಜಿಸಿದ್ದಾರೆ. ಕಾಡಿಗೆ ಗುಡ್ ಬೈ ಹೇಳಿ ಸಮಾಜದ ಮುಖ್ಯವಾಹಿನಿಗೆ ಬಂದಿದ್ದಾರೆ. ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಿಎಂ ಸಿದ್ದರಾಮಯ್ಯ ಸಂವಿಧಾನ ಪುಸ್ತಕ ನೀಡಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.