ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಹಾಡಹಗಲೇ ಚಿನ್ನದಂಗಡಿ ದರೋಡೆಯಾಗಿದೆ. ಹುಣಸೂರು ಬಸ್ ನಿಲ್ದಾಣ ಹಿಂಭಾಗ ಇರುವ ಸ್ಕೈ ಗೋಲ್ಡ್ಸ್ ಆಂಡ್ ಡೈಮಂಡ್ಸ್ ಚಿನ್ನದ ಅಂಗಡಿಗೆ ನುಗ್ಗಿದ ಐವರು ಮುಸುಕುಧಾರಿ ದರೋಡೆಕೋರರು, ಗನ್ ತೋರಿಸಿ ಸುಮಾರು 4 ರಿಂದ 5 ಕೋಟಿ ರೂಪಾಯಿ ಮೌಲ್ಯದ ಚಿನ್ನ ಮತ್ತು ವಜ್ರಾಭರಣಗಳನ್ನು ಲೂಟಿ ಮಾಡಿಕೊಂಡು ಪರಾರಿಯಾಗಿದ್ದಾರೆ. ಬೈಕ್‌ಗಳಲ್ಲಿ ಬಂದಿದ್ದ ಈ ಐವರು ದರೋಡೆಕೋರರು ಅಂಗಡಿಗೆ ನುಗ್ಗಿ ಸಿಬ್ಬಂದಿಯನ್ನು ಗನ್ನಿಂದ ಹೆದರಿಸಿ, ಚೀಲದಲ್ಲಿ ಚಿನ್ನಾಭರಣಗಳನ್ನು ದೋಚಿಕೊಂಡು ಹೋಗಿದ್ದಾರೆ. ಹಾಡಹಗಲೇ ಈ ದರೋಡೆಯಿಂದಾಗಿ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ತನಿಖೆ ನಡೆಸಿದ್ದಾರೆ.
ಮೈಸೂರು, (ಡಿಸೆಂಬರ್ 28): ಮೈಸೂರು (Mysuru) ಜಿಲ್ಲೆಯ ಹುಣಸೂರಿನಲ್ಲಿ ಹಾಡಹಗಲೇ ಚಿನ್ನದಂಗಡಿ ದರೋಡೆಯಾಗಿದೆ. ಹುಣಸೂರು ಬಸ್ ನಿಲ್ದಾಣ ಹಿಂಭಾಗ ಇರುವ ಸ್ಕೈ ಗೋಲ್ಡ್ಸ್ ಆಂಡ್ ಡೈಮಂಡ್ಸ್ ಚಿನ್ನದ ಅಂಗಡಿಗೆ ನುಗ್ಗಿದ ಐವರು ಮುಸುಕುಧಾರಿ ದರೋಡೆಕೋರರು, ಗನ್ ತೋರಿಸಿ ಸುಮಾರು 4 ರಿಂದ 5 ಕೋಟಿ ರೂಪಾಯಿ ಮೌಲ್ಯದ ಚಿನ್ನ ಮತ್ತು ವಜ್ರಾಭರಣಗಳನ್ನು ಲೂಟಿ ಮಾಡಿಕೊಂಡು ಪರಾರಿಯಾಗಿದ್ದಾರೆ. ಬೈಕ್‌ಗಳಲ್ಲಿ ಬಂದಿದ್ದ ಈ ಐವರು ದರೋಡೆಕೋರರು ಅಂಗಡಿಗೆ ನುಗ್ಗಿ ಸಿಬ್ಬಂದಿಯನ್ನು ಗನ್ನಿಂದ ಹೆದರಿಸಿ, ಚೀಲದಲ್ಲಿ ಚಿನ್ನಾಭರಣಗಳನ್ನು ದೋಚಿಕೊಂಡು ಹೋಗಿದ್ದಾರೆ. ಹಾಡಹಗಲೇ ಈ ದರೋಡೆಯಿಂದಾಗಿ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ತನಿಖೆ ನಡೆಸಿದ್ದಾರೆ.
ಕೇರಳ ಮೂಲದ ವ್ಯಕ್ತಿ ಮಾಲೀಕತ್ವದ ಸ್ಕೈ ಹೆಸರಿನ ಆಭರಣದಂಗಡಿಯನ್ನು 27/04/2015ರಂದು ಉದ್ಘಾಟನೆ ಮಾಡಿದ್ದರು. ಸದ್ಯ ದರೋಡೆಯಾಗಿರುವ ವಿಷಯ ತಿಳಿದು ಜ್ಯುವೆಲ್ಲರಿ ಶಾಪ್ಗೆ ಐಜಿಪಿ ಬೋರಲಿಂಗಯ್ಯ ಹಾಗೂ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ್ರಿಂದ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Dec 28, 2025 05:11 PM
ಉತ್ತರ ಪ್ರದೇಶದಲ್ಲಿ ತರಬೇತಿ ವಿಮಾನ ಪತನ; ಮಹಿಳಾ ಪೈಲಟ್ಗೆ ಗಂಭೀರ ಗಾಯ
ಬೆಂಗಳೂರಿಗರ ಬಗ್ಗೆ ಸಚಿವ ಕೃಷ್ಣಭೈರೇಗೌಡರ ಅಂತರಾಳದ ನುಡಿಗಳು
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
"ವಿಜಯೇಂದ್ರನನ್ನು ಕಿತ್ತು ಬಿಸಾಕಿ": ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ
