ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ

Edited By:

Updated on: Dec 28, 2025 | 5:19 PM

ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಹಾಡಹಗಲೇ ಚಿನ್ನದಂಗಡಿ ದರೋಡೆಯಾಗಿದೆ. ಹುಣಸೂರು ಬಸ್ ನಿಲ್ದಾಣ ಹಿಂಭಾಗ ಇರುವ ಸ್ಕೈ ಗೋಲ್ಡ್ಸ್ ಆಂಡ್ ಡೈಮಂಡ್ಸ್ ಚಿನ್ನದ ಅಂಗಡಿಗೆ ನುಗ್ಗಿದ ಐವರು ಮುಸುಕುಧಾರಿ ದರೋಡೆಕೋರರು, ಗನ್ ತೋರಿಸಿ ಸುಮಾರು 4 ರಿಂದ 5 ಕೋಟಿ ರೂಪಾಯಿ ಮೌಲ್ಯದ ಚಿನ್ನ ಮತ್ತು ವಜ್ರಾಭರಣಗಳನ್ನು ಲೂಟಿ ಮಾಡಿಕೊಂಡು ಪರಾರಿಯಾಗಿದ್ದಾರೆ. ಬೈಕ್‌ಗಳಲ್ಲಿ ಬಂದಿದ್ದ ಈ ಐವರು ದರೋಡೆಕೋರರು ಅಂಗಡಿಗೆ ನುಗ್ಗಿ ಸಿಬ್ಬಂದಿಯನ್ನು ಗನ್​​​ನಿಂದ ಹೆದರಿಸಿ, ಚೀಲದಲ್ಲಿ ಚಿನ್ನಾಭರಣಗಳನ್ನು ದೋಚಿಕೊಂಡು ಹೋಗಿದ್ದಾರೆ. ಹಾಡಹಗಲೇ ಈ ದರೋಡೆಯಿಂದಾಗಿ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ತನಿಖೆ ನಡೆಸಿದ್ದಾರೆ.

ಮೈಸೂರು, (ಡಿಸೆಂಬರ್ 28): ಮೈಸೂರು (Mysuru) ಜಿಲ್ಲೆಯ ಹುಣಸೂರಿನಲ್ಲಿ ಹಾಡಹಗಲೇ ಚಿನ್ನದಂಗಡಿ ದರೋಡೆಯಾಗಿದೆ. ಹುಣಸೂರು ಬಸ್ ನಿಲ್ದಾಣ ಹಿಂಭಾಗ ಇರುವ ಸ್ಕೈ ಗೋಲ್ಡ್ಸ್ ಆಂಡ್ ಡೈಮಂಡ್ಸ್ ಚಿನ್ನದ ಅಂಗಡಿಗೆ ನುಗ್ಗಿದ ಐವರು ಮುಸುಕುಧಾರಿ ದರೋಡೆಕೋರರು, ಗನ್ ತೋರಿಸಿ ಸುಮಾರು 4 ರಿಂದ 5 ಕೋಟಿ ರೂಪಾಯಿ ಮೌಲ್ಯದ ಚಿನ್ನ ಮತ್ತು ವಜ್ರಾಭರಣಗಳನ್ನು ಲೂಟಿ ಮಾಡಿಕೊಂಡು ಪರಾರಿಯಾಗಿದ್ದಾರೆ. ಬೈಕ್‌ಗಳಲ್ಲಿ ಬಂದಿದ್ದ ಈ ಐವರು ದರೋಡೆಕೋರರು ಅಂಗಡಿಗೆ ನುಗ್ಗಿ ಸಿಬ್ಬಂದಿಯನ್ನು ಗನ್​​​ನಿಂದ ಹೆದರಿಸಿ, ಚೀಲದಲ್ಲಿ ಚಿನ್ನಾಭರಣಗಳನ್ನು ದೋಚಿಕೊಂಡು ಹೋಗಿದ್ದಾರೆ. ಹಾಡಹಗಲೇ ಈ ದರೋಡೆಯಿಂದಾಗಿ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ತನಿಖೆ ನಡೆಸಿದ್ದಾರೆ.

ಕೇರಳ ಮೂಲದ ವ್ಯಕ್ತಿ ಮಾಲೀಕತ್ವದ ಸ್ಕೈ ಹೆಸರಿನ ಆಭರಣದಂಗಡಿಯನ್ನು 27/04/2015ರಂದು ಉದ್ಘಾಟನೆ ಮಾಡಿದ್ದರು. ಸದ್ಯ ದರೋಡೆಯಾಗಿರುವ ವಿಷಯ ತಿಳಿದು ಜ್ಯುವೆಲ್ಲರಿ ಶಾಪ್​ಗೆ ಐಜಿಪಿ ಬೋರಲಿಂಗಯ್ಯ ಹಾಗೂ ಹೆಚ್ಚುವರಿ ಪೊಲೀಸ್​ ವರಿಷ್ಠಾಧಿಕಾರಿ ನಾಗೇಶ್​ರಿಂದ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Dec 28, 2025 05:11 PM
Follow Us
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More