VIDEO: ಪಂದ್ಯದ ವೇಳೆ ಮೈದಾನಕ್ಕೆ ನುಗ್ಗಿದ ಹಾವು… ಆಮೇಲೇನಾಯ್ತು?
ಈ ಮ್ಯಾಚ್ನಲ್ಲಿ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ತಂಡವು 49.2 ಓವರ್ಗಳಲ್ಲಿ 244 ರನ್ಗಳಿಸಿ ಆಲೌಟ್ ಆಗಿದ್ದರು. ಈ ಸುಲಭ ಗುರಿಯನ್ನು ಬೆನ್ನತ್ತಿದ ಬಾಂಗ್ಲಾದೇಶ್ ತಂಡವು 1 ವಿಕೆಟ್ ಕಳೆದುಕೊಂಡು 100 ರನ್ ಕಲೆಹಾಕಿದ್ದರು. ಆದರೆ ಆ ಬಳಿಕ ದಿಢೀರ್ ಕುಸಿತಕ್ಕೊಳಗಾದ ಬಾಂಗ್ಲಾದೇಶ್ 167 ರನ್ಗಳಿಗೆ ಆಲೌಟ್ ಆಗಿದ್ದಾರೆ.
ಶ್ರೀಲಂಕಾದಲ್ಲಿ ಪಂದ್ಯ ನಡೆಯುವಾಗ ಹಾವು ಕಾಣಿಸಿಕೊಳ್ಳುವುದು ಹೊಸ ವಿಷಯವಲ್ಲ. ಅದು ಈಗ ಬಾಂಗ್ಲಾದೇಶ್-ಶ್ರೀಲಂಕಾ ನಡುವಣ ಸರಣಿಯಲ್ಲೂ ಮುಂದುವರೆದಿದೆ. ಕೊಲಂಬೊದ ಆರ್. ಪ್ರೇಮದಾಸ ಮೈದಾನದಲ್ಲಿ ನಡೆಯುತ್ತಿದ್ದ ಮೊದಲ ಏಕದಿನ ಪಂದ್ಯದ ವೇಳೆ ಮೈದಾನಕ್ಕೆ ಹಾವು ನುಗ್ಗಿದೆ. ಅಲ್ಲದೆ ಕೆಲ ಹೊತ್ತು ಮೈದಾನದಲ್ಲೇ ಓಡಾಡಿಕೊಂಡಿದೆ. ಇದರಿಂದ ಕೆಲ ಹೊತ್ತು ಪಂದ್ಯ ಸ್ಥಗಿತಗೊಂಡಿತು.
ಆ ಬಳಿಕ ಭದ್ರತಾ ಸಿಬ್ಬಂದಿಗಳು ಆಗಮಿಸಿ, ಹಾವನ್ನು ಮೈದಾನದಿಂದ ಹೊರಹಾಕುವಲ್ಲಿ ಯಶಸ್ವಿಯಾದರು. ಈ ಮೂಲಕ ಪಂದ್ಯವನ್ನು ಮುಂದುವರೆಸಲಾಯಿತು. ಇದೀಗ ಮೈದಾನದಲ್ಲಿ ಓಡಾಡುತ್ತಿದ್ದ ಹಾವಿನ ವಿಡಿಯೋ ವೈರಲ್ ಆಗಿದೆ.
ಇನ್ನು ಈ ಮ್ಯಾಚ್ನಲ್ಲಿ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ತಂಡವು 49.2 ಓವರ್ಗಳಲ್ಲಿ 244 ರನ್ಗಳಿಸಿ ಆಲೌಟ್ ಆಗಿದ್ದರು. ಈ ಸುಲಭ ಗುರಿಯನ್ನು ಬೆನ್ನತ್ತಿದ ಬಾಂಗ್ಲಾದೇಶ್ ತಂಡವು 1 ವಿಕೆಟ್ ಕಳೆದುಕೊಂಡು 100 ರನ್ ಕಲೆಹಾಕಿದ್ದರು. ಆದರೆ ಆ ಬಳಿಕ ದಿಢೀರ್ ಕುಸಿತಕ್ಕೊಳಗಾದ ಬಾಂಗ್ಲಾದೇಶ್ 167 ರನ್ಗಳಿಗೆ ಆಲೌಟ್ ಆಗಿದ್ದಾರೆ. ಈ ಮೂಲಕ ಶ್ರೀಲಂಕಾ ತಂಡವು ಮೊದಲ ಏಕದಿನ ಪಂದ್ಯದಲ್ಲಿ 77 ರನ್ಗಳ ಭರ್ಜರಿ ಜಯ ಸಾಧಿಸಿದೆ.
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್ಗಂಜ್ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು

