VIDEO: ಪಂದ್ಯದ ವೇಳೆ ಮೈದಾನಕ್ಕೆ ನುಗ್ಗಿದ ಹಾವು… ಆಮೇಲೇನಾಯ್ತು?

Updated on: Jul 03, 2025 | 11:31 AM

ಈ ಮ್ಯಾಚ್​ನಲ್ಲಿ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ತಂಡವು 49.2 ಓವರ್​ಗಳಲ್ಲಿ 244 ರನ್​ಗಳಿಸಿ ಆಲೌಟ್ ಆಗಿದ್ದರು. ಈ ಸುಲಭ ಗುರಿಯನ್ನು ಬೆನ್ನತ್ತಿದ ಬಾಂಗ್ಲಾದೇಶ್ ತಂಡವು 1 ವಿಕೆಟ್ ಕಳೆದುಕೊಂಡು 100 ರನ್ ಕಲೆಹಾಕಿದ್ದರು. ಆದರೆ ಆ ಬಳಿಕ ದಿಢೀರ್ ಕುಸಿತಕ್ಕೊಳಗಾದ ಬಾಂಗ್ಲಾದೇಶ್ 167 ರನ್​ಗಳಿಗೆ ಆಲೌಟ್ ಆಗಿದ್ದಾರೆ.

ಶ್ರೀಲಂಕಾದಲ್ಲಿ ಪಂದ್ಯ ನಡೆಯುವಾಗ ಹಾವು ಕಾಣಿಸಿಕೊಳ್ಳುವುದು ಹೊಸ ವಿಷಯವಲ್ಲ. ಅದು ಈಗ ಬಾಂಗ್ಲಾದೇಶ್-ಶ್ರೀಲಂಕಾ ನಡುವಣ ಸರಣಿಯಲ್ಲೂ ಮುಂದುವರೆದಿದೆ. ಕೊಲಂಬೊದ ಆರ್​. ಪ್ರೇಮದಾಸ ಮೈದಾನದಲ್ಲಿ ನಡೆಯುತ್ತಿದ್ದ ಮೊದಲ ಏಕದಿನ ಪಂದ್ಯದ ವೇಳೆ ಮೈದಾನಕ್ಕೆ ಹಾವು ನುಗ್ಗಿದೆ. ಅಲ್ಲದೆ ಕೆಲ ಹೊತ್ತು ಮೈದಾನದಲ್ಲೇ ಓಡಾಡಿಕೊಂಡಿದೆ. ಇದರಿಂದ ಕೆಲ ಹೊತ್ತು ಪಂದ್ಯ ಸ್ಥಗಿತಗೊಂಡಿತು.

ಆ ಬಳಿಕ ಭದ್ರತಾ ಸಿಬ್ಬಂದಿಗಳು ಆಗಮಿಸಿ, ಹಾವನ್ನು ಮೈದಾನದಿಂದ ಹೊರಹಾಕುವಲ್ಲಿ ಯಶಸ್ವಿಯಾದರು. ಈ ಮೂಲಕ ಪಂದ್ಯವನ್ನು ಮುಂದುವರೆಸಲಾಯಿತು. ಇದೀಗ ಮೈದಾನದಲ್ಲಿ ಓಡಾಡುತ್ತಿದ್ದ ಹಾವಿನ ವಿಡಿಯೋ ವೈರಲ್ ಆಗಿದೆ.

ಇನ್ನು ಈ ಮ್ಯಾಚ್​ನಲ್ಲಿ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ತಂಡವು 49.2 ಓವರ್​ಗಳಲ್ಲಿ 244 ರನ್​ಗಳಿಸಿ ಆಲೌಟ್ ಆಗಿದ್ದರು. ಈ ಸುಲಭ ಗುರಿಯನ್ನು ಬೆನ್ನತ್ತಿದ ಬಾಂಗ್ಲಾದೇಶ್ ತಂಡವು 1 ವಿಕೆಟ್ ಕಳೆದುಕೊಂಡು 100 ರನ್ ಕಲೆಹಾಕಿದ್ದರು. ಆದರೆ ಆ ಬಳಿಕ ದಿಢೀರ್ ಕುಸಿತಕ್ಕೊಳಗಾದ ಬಾಂಗ್ಲಾದೇಶ್ 167 ರನ್​ಗಳಿಗೆ ಆಲೌಟ್ ಆಗಿದ್ದಾರೆ. ಈ ಮೂಲಕ ಶ್ರೀಲಂಕಾ ತಂಡವು ಮೊದಲ ಏಕದಿನ ಪಂದ್ಯದಲ್ಲಿ 77 ರನ್​ಗಳ ಭರ್ಜರಿ ಜಯ ಸಾಧಿಸಿದೆ.

Published on: Jul 03, 2025 11:30 AM
Follow Us
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More