AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಗ್ಯವಂತ ಗಂಡುಮಗುವಿಗೆ ಜನ್ಮನೀಡಿದ ಮೃತ ರೇಣುಕಾಸ್ವಾಮಿ ಪತ್ನಿ ಸಹನಾ

ಆರೋಗ್ಯವಂತ ಗಂಡುಮಗುವಿಗೆ ಜನ್ಮನೀಡಿದ ಮೃತ ರೇಣುಕಾಸ್ವಾಮಿ ಪತ್ನಿ ಸಹನಾ

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Oct 16, 2024 | 12:18 PM

Share

ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ನಡೆಯುತ್ತಿದ್ದು ಚಿತ್ರನಟ ದರ್ಶನ್, ಅವರ ಸ್ನೇಹಿತೆ ಪವಿತ್ರಾ ಗೌಡ ಸೇರಿದಂತೆ ಒಟ್ಟು 17 ಆರೋಪಿಗಳನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿಗಳಲ್ಲಿ ಒಬ್ಬರಿಗೆ ಮೊನ್ನೆ ಜಾಮೀನು ಸಿಕ್ಕಿದೆ ಮಿಕ್ಕವರು ಅದಕ್ಕಾಗಿ ಎದುರು ನೋಡುತ್ತಿದ್ದಾರೆ.

ಚಿತ್ರದುರ್ಗ: ಜೂನ್ ತಿಂಗಳಲ್ಲಿ ಕೊಲೆಯಾದ ರೇಣುಕಾಸ್ವಾಮಿಯವರ ಪತ್ನಿ ಸಹನಾ ಇಂದು ಬೆಳಗ್ಗೆ ಸುಮಾರು 6 ಗಂಟೆಗೆ ಒಂದು ಗಂಡು ಮಗುವಿಗೆ ಜನ್ಮನೀಡಿದ್ದಾರೆ. ಮಾಧ್ಯಮಗಳ ಜೊತೆ ಭಾವುಕರಾಗಿ ತಮ್ಮ ಸಂತಸವನ್ನು ಹಂಚಿಕೊಂಡ ರೇಣುಕಾಸ್ವಾಮಿ ತಂದೆ ಶಿವನಗೌಡ, ಆರೋಗ್ಯವಂತ ಗಂಡುಮಗುವಿಗೆ ತಮ್ಮ ಸೊಸೆ ಜನ್ಮ ನೀಡಿದ್ದಾರೆ, ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ, ತಮ್ಮ ಮಗನೇ ಮತ್ತೊಮ್ಮೆ ಹುಟ್ಟಿ ಬಂದಷ್ಟು ಸಂತೋಷವಾಗುತ್ತಿದೆ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ದರ್ಶನ್ ಜಾಮೀನು ಅರ್ಜಿ ವಜಾ: ರೇಣುಕಾಸ್ವಾಮಿ ತಂದೆಯ ಮೊದಲ ಪ್ರತಿಕ್ರಿಯೆ ಇಲ್ಲಿದೆ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.