Ishaq Dar Video: ವಿದೇಶಿ ಅತಿಥಿಗಳ ಮುಂದೆ ಎಡವಿ ಬಿದ್ದ ಪಾಕಿಸ್ತಾನ ಉಪ ಪ್ರಧಾನಿ ಇಶಾಕ್ ದಾರ್

Updated on: Mar 30, 2026 | 7:13 AM

ಪಾಕಿಸ್ತಾನ ಉಪ ಪ್ರಧಾನಿ ಮತ್ತು ವಿದೇಶಾಂಗ ಸಚಿವ ಇಶಾಕ್ ದಾರ್ ಈಜಿಪ್ಟ್​ ವಿದೇಶಾಂಗ ಸಚಿವರನ್ನು ಸ್ವಾಗತಿಸುವಾಗ ಕಾಲು ಜಾರಿ ಬಿದ್ದಿರುವ ವಿಡಿಯೋ ವೈರಲ್ ಆಗಿದೆ.ಸ್ಥಳದಲ್ಲಿದ್ದ ಭದ್ರತಾ ಸಿಬ್ಬಂದಿ ಮತ್ತು ಅಧಿಕಾರಿಗಳು ತಕ್ಷಣ ಅವರನ್ನು ಮೇಲಕ್ಕೆತ್ತಲು ಸಹಾಯ ಮಾಡಿದರು. ಅದೃಷ್ಟವಶಾತ್, ಅವರು ಬಿದ್ದಿದ್ದರಿಂದ ಯಾವುದೇ ಗಂಭೀರ ಗಾಯಗಳಾಗಿಲ್ಲ. ಇರಾನ್-ಇಸ್ರೇಲ್-ಅಮೆರಿಕದ ನಡುವೆ ನಡೆಯುತ್ತಿರುವ ಉದ್ವಿಗ್ನತೆ ಕಡಿಮೆ ಮಾಡಲು ತಾವು ಮಧ್ಯಸ್ಥಿಕೆ ವಹಿಸುತ್ತೇವೆ ಎಂದು ಪಾಕಿಸ್ತಾನ ಮುಂದೆ ಬಂದಿದೆ.

ಇಸ್ಲಾಮಾಬಾದ್, ಮಾರ್ಚ್​ 30: ಪಾಕಿಸ್ತಾನ ಉಪ ಪ್ರಧಾನಿ ಮತ್ತು ವಿದೇಶಾಂಗ ಸಚಿವ ಇಶಾಕ್ ದಾರ್ ಈಜಿಪ್ಟ್​ ವಿದೇಶಾಂಗ ಸಚಿವರನ್ನು ಸ್ವಾಗತಿಸುವಾಗ ಕಾಲು ಜಾರಿ ಬಿದ್ದಿರುವ ವಿಡಿಯೋ ವೈರಲ್ ಆಗಿದೆ. ಸ್ಥಳದಲ್ಲಿದ್ದ ಭದ್ರತಾ ಸಿಬ್ಬಂದಿ ಮತ್ತು ಅಧಿಕಾರಿಗಳು ತಕ್ಷಣ ಅವರನ್ನು ಮೇಲಕ್ಕೆತ್ತಲು ಸಹಾಯ ಮಾಡಿದರು. ಅದೃಷ್ಟವಶಾತ್, ಅವರು ಬಿದ್ದಿದ್ದರಿಂದ ಯಾವುದೇ ಗಂಭೀರ ಗಾಯಗಳಾಗಿಲ್ಲ.

ಇರಾನ್-ಇಸ್ರೇಲ್-ಅಮೆರಿಕದ ನಡುವೆ ನಡೆಯುತ್ತಿರುವ ಉದ್ವಿಗ್ನತೆ ಕಡಿಮೆ ಮಾಡಲು ತಾವು ಮಧ್ಯಸ್ಥಿಕೆ ವಹಿಸುತ್ತೇವೆ ಎಂದು ಪಾಕಿಸ್ತಾನ ಮುಂದೆ ಬಂದಿದೆ. ಪಾಕಿಸ್ತಾನದ ವಿದೇಶಾಂಗ ಸಚಿವಾಲಯವು ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಿ, ಇಶಾಕ್ ದಾರ್ ಸಂಪೂರ್ಣವಾಗಿ ಆರೋಗ್ಯವಾಗಿದ್ದಾರೆ ಎಂದು ಸ್ಪಷ್ಟಪಡಿಸಿದೆ. ಅವರು ಪ್ರಸ್ತುತ ಈಜಿಪ್ಟ್, ಟರ್ಕಿ ಮತ್ತು ಸೌದಿ ಅರೇಬಿಯಾದ ನಾಯಕರೊಂದಿಗೆ ಪ್ರಮುಖ ಚರ್ಚೆಗಳನ್ನು ನಡೆಸುತ್ತಿದ್ದಾರೆ.

ಹಾರ್ಮುಜ್ ಜಲಸಂಧಿಯ ಮೂಲಕ ಪಾಕಿಸ್ತಾನ ಧ್ವಜ ಹೊಂದಿರುವ 20 ಹೆಚ್ಚುವರಿ ಹಡಗುಗಳಿಗೆ ಸಾಗಣೆಗೆ ಇರಾನ್ ಸರ್ಕಾರ ಒಪ್ಪಿಗೆ ನೀಡಿದೆ ಎಂದು ಅವರು ಹೇಳಿದ್ದಾರೆ. ಒಪ್ಪಂದದ ಪ್ರಕಾರ, ಈಗ ಪ್ರತಿದಿನ ಎರಡು ಹಡಗುಗಳು ಈ ಮಾರ್ಗದಲ್ಲಿ ಸಾಗಲು ಸಾಧ್ಯವಾಗುತ್ತದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More