Karnataka Assembly Polls: ಕಾಂಗ್ರೆಸ್ ಗೆ ಆಘಾತ, ಎಸ್ ಎಂ ಕೃಷ್ಣ ಅಣ್ಣನ ಮಗ ಗುರುಚರಣ್ ಜೆಡಿಎಸ್ ಸೇರ್ಪಡೆ, ಮದ್ದೂರು ಟಿಕೆಟ್ ಸಿಗದ ಕಾರಣ ಬಂಡಾಯ

ಅರುಣ್​ ಕುಮಾರ್​ ಬೆಳ್ಳಿ

Updated on: Apr 20, 2023 | 11:49 AM

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್ ಡಿ ಕುಮಾರಸ್ವಾಮಿ ಮದ್ದೂರು ಸೋಮನಹಳ್ಳಿ ಗ್ರಾಮದಲ್ಲಿರುವ ಗುರುಚರಣ್ ಮನೆಗೆ ಭೇಟಿ ನೀಡಿ ಗುರುಚರಣ್ ರನ್ನು ಪಕ್ಷಕ್ಕೆ ಬರಮಾಡಿಕೊಂಡರು.

ಮಂಡ್ಯ: ಜಿಲ್ಲೆಯ ಮದ್ದೂರು ವಿಧಾನ ಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆ ಆಘಾತ ಎದುರಾಗಿದೆ. ಟಿಕೆಟ್ ಆಕಾಂಕ್ಷಿ ಮತ್ತು ಇಲ್ಲಿನ ಪ್ರಭಾವಿ ನಾಯಕರಾಗಿದ್ದ ಎಸ್ ಗುರುಚರಣ್ (S Gurucharan) ತಮ್ಮ ಬೆಂಬಲಿಗರೊಂದಿಗೆ ಪಕ್ಷ ತೊರೆದು ಜೆಡಿಎಸ್ ಸೇರಿದ್ದಾರೆ. ಗುರುಚರಣ್ ರಾಜ್ಯದ ಹಿರಿಯ ಮುತ್ಸದ್ದಿ ಮತ್ತು ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ (SM Krishna) ಅವರ ಸಹೋದರನ ಪುತ್ರ. ಕಾಂಗ್ರೆಸ್ ವರಿಷ್ಠರು ತಮ್ಮ ಬದಲಿಗೆ ಕದಲೂರು ಉದಯ್ ಗೆ ಟಿಕೆಟ್ ನೀಡಿದ್ದರಿಂದ ಅಸಮಾಧಾನಗೊಂಡಿರುವ ಗುರುಚರಣ್ ಇಂದು ಜೆಡಿಎಸ್ ಪಕ್ಷ ಸೇರಿದರು. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಮದ್ದೂರು ಸೋಮನಹಳ್ಳಿ ಗ್ರಾಮದಲ್ಲಿರುವ ಗುರುಚರಣ್ ಮನೆಗೆ ಭೇಟಿ ನೀಡಿ ಗುರುಚರಣ್ ರನ್ನು ಪಕ್ಷಕ್ಕೆ ಬರಮಾಡಿಕೊಂಡರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.