ಜೆಡಿಎಸ್-ಬಿಜೆಪಿ ಕಾರ್ಯಕರ್ತರಲ್ಲಿ ಸಣ್ಣಪುಟ್ಟ ಗೊಂದಲಗಳಿದ್ದರೂ ದೇಶದ ಹಿತದೃಷ್ಟಿಯಿಂದ ಒಟ್ಟಾಗಿ ಪ್ರಚಾರ ಮಾಡಲಿದ್ದಾರೆ: ಬಿವೈ ವಿಜಯೇಂದ್ರ

ಜೆಡಿಎಸ್-ಬಿಜೆಪಿ ಕಾರ್ಯಕರ್ತರಲ್ಲಿ ಸಣ್ಣಪುಟ್ಟ ಗೊಂದಲಗಳಿದ್ದರೂ ದೇಶದ ಹಿತದೃಷ್ಟಿಯಿಂದ ಒಟ್ಟಾಗಿ ಪ್ರಚಾರ ಮಾಡಲಿದ್ದಾರೆ: ಬಿವೈ ವಿಜಯೇಂದ್ರ

ಅರುಣ್​ ಕುಮಾರ್​ ಬೆಳ್ಳಿ
|

Updated on: Mar 29, 2024 | 4:41 PM

ಏಪ್ರಿಲ್ 4 ರಂದು ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಅವರು ನಾಮಪತ್ರ ಸಲ್ಲಿಸಲಿದ್ದು ಆ ಸಂದರ್ಭದಲ್ಲಿ ತಾನು ಅವರೊಂದಿಗಿರುವುದಾಗಿ ವಿಜಯೇಂದ್ರ ಹೇಳಿದರು. ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಜಂಟಿಯಾಗಿ ಎಲ್ಲ 28 ಲೋಕಸಭಾ ಕ್ಷೇತ್ರಗಳಲ್ಲಿ ಪ್ರಚಾರ ನಡೆಸುತ್ತಾರೆ ಎಂದು ವಿಜಯೇಂದ್ರ ಸ್ಪಷ್ಟಪಡಿಸಿದರು.

ಬೆಂಗಳೂರು: ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ಯಾವುದೇ ಚಿಕ್ಕಪುಟ್ಟ ಗೊಂದಲಗಳಿದ್ದರೂ ಸಾಮರಸ್ಯದೊಂದಿಗೆ ಲೋಕಸಭಾ ಚುನಾವಣಾ ಪ್ರಚಾರ (electioneering) ಕಾರ್ಯದಲ್ಲಿ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಹೇಳಿದರು. ನಗರದ ಹೋಟೆಲೊಂದರಲ್ಲಿ ಇಂದು ಬಿಜೆಪಿ-ಜೆಡಿಎಸ್ ನಾಯಕರ ಸಮನ್ವಯ ಸಮಿತಿ ಸಭೆಯ ಬಳಿಕ ಮಾತಾಡಿದ ಅವರು, ನಿನ್ನೆಯೇ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಜೊತೆಯಾಗಿ ಮೈಸೂರು ಮತ್ತು ಮಂಡ್ಯದಲ್ಲಿ ಕಾರ್ಯಕರ್ತರ ಸಭೆಗಳನ್ನು ನಡೆಸಿದ್ದೇವೆ, ಇವತ್ತಿನ ಸಭೆಯಲ್ಲಿ ಮಾನ್ಯ ದೇವೇಗೌಡ (HD Devegowda) ಮತ್ತು ಯಡಿಯೂರಪ್ಪನವರು (BS Yediyurappa) ಹೇಳಿದ ಹಾಗೆ ದೇಶದ ಹಿತದೃಷ್ಟಿಯಿಂದ ಕಾರ್ಯಕರ್ತರ ನಡುವೆ ಏನೇ ವ್ಯತ್ಯಾಸಗಳಿದ್ದರೂ ಅವನ್ನೆಲ್ಲ ಬದಿಗೊತ್ತಿ ಎಲ್ಲರೂ ಒಟ್ಟಾಗಿ ಕೆಲಸ ಮಾಡಲಿದ್ದಾರೆ ಎಂದು ವಿಜಯೇಂದ್ರ ಹೇಳಿದರು. ಮುಂದುವರಿದು ಮಾತಾಡಿದ ಅವರು ಏಪ್ರಿಲ್ 4 ರಂದು ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಅವರು ನಾಮಪತ್ರ ಸಲ್ಲಿಸಲಿದ್ದು ಆ ಸಂದರ್ಭದಲ್ಲಿ ತಾನು ಅವರೊಂದಿಗಿರುವುದಾಗಿ ಹೇಳಿದರು. ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಜಂಟಿಯಾಗಿ ಎಲ್ಲ 28 ಲೋಕಸಭಾ ಕ್ಷೇತ್ರಗಳಲ್ಲಿ ಪ್ರಚಾರ ನಡೆಸುತ್ತಾರೆ ಎಂದು ವಿಜಯೇಂದ್ರ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ದೇವೇಗೌಡರ ಆಶೀರ್ವಾದ ಆನೆ ಬಲ ತಂದಿದೆ: ಬಿಜೆಪಿ ಜೆಡಿಎಸ್ ಸಮನ್ವಯ ಸಭೆ ಬಳಿಕ ವಿಜಯೇಂದ್ರ ಹರ್ಷ