ಸ್ಮೃತಿ – ಪಲಾಶ್ ಸಂಗೀತ್ನಲ್ಲಿ ಟೀಮ್ ಇಂಡಿಯಾ ಆಟಗಾರ್ತಿಯರ ಭರ್ಜರಿ ಡ್ಯಾನ್ಸ್
Smriti Mandhana and Palash Muchhal: ಗೆಳೆತಿಯ ಮದುವೆಗೆ ಆಪ್ತರೆನಿಸಿಕೊಂಡಿರುವ ಜೆಮಿಮಾ, ರಾಧಾ, ಆರುಂಧತಿ ಹಾಗೂ ಯಾಸ್ತಿಕಾ ಭರ್ಜರಿ ಸ್ಟೆಪ್ಸ್ ಹಾಕಿದ್ದು, ಇದೀಗ ಈ ವಿಡಿಯೋ ತುಣುಕನ್ನು ಶ್ರೇಯಾಂಕಾ ಪಾಟೀಲ್ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋಗೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.
ಟೀಮ್ ಇಂಡಿಯಾದ ಸ್ಟಾರ್ ಆಟಗಾರ್ತಿ ಸ್ಮೃತಿ ಮಂಧಾನ ಹಾಗೂ ಬಾಲಿವುಡ್ ಸಂಗೀತ ನಿರ್ದೇಶಕ ಪಲಾಶ್ ಮುಚ್ಚಲ್ ಭಾನುವಾರ (ನ.23) ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಇದಕ್ಕೂ ಮುನ್ನ ಶನಿವಾರ ರಾತ್ರಿ ನಡೆದ ಸಂಗೀತ್ ಕಾರ್ಯಕ್ರಮದಲ್ಲಿ ಟೀಮ್ ಇಂಡಿಯಾ ಆಟಗಾರ್ತಿಯರು ಭರ್ಜರಿ ಸ್ಟೆಪ್ಸ್ ಹಾಕಿದ್ದಾರೆ.
ಭಾರತ ಮಹಿಳಾ ತಂಡದ ಆಟಗಾರ್ತಿಯರಾದ ಆರುಂಧತಿ ರೆಡ್ಡಿ, ಶ್ರೇಯಾಂಕಾ ಪಾಟೀಲ್, ರಾಧಾ ಯಾದವ್, ಜೆಮಿಮಾ ರೊಡ್ರಿಗಸ್ ಹಾಗೂ ಯಾಸ್ತಿಕಾ ಭಾಟಿಯಾ ಸಂಗೀತ್ ಕಾರ್ಯಕ್ರಮದಲ್ಲಿ ಡ್ಯಾನ್ಸ್ ಮಾಡಿರುವ ವಿಡಿಯೋ ಇದೀಗ ವೈರಲ್ ಆಗಿದೆ.
ಗೆಳೆತಿಯ ಮದುವೆಗೆ ಆಪ್ತರೆನಿಸಿಕೊಂಡಿರುವ ಜೆಮಿಮಾ, ರಾಧಾ, ಆರುಂಧತಿ ಹಾಗೂ ಯಾಸ್ತಿಕಾ ಭರ್ಜರಿ ಸ್ಟೆಪ್ಸ್ ಹಾಕಿದ್ದು, ಇದೀಗ ಈ ವಿಡಿಯೋ ತುಣುಕನ್ನು ಶ್ರೇಯಾಂಕಾ ಪಾಟೀಲ್ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋಗೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.