ರನ್ ಗುಡ್ಡೆ ಹಾಕುವ ವಿಚಾರದಲ್ಲಿ ಕಿಂಗ್ ಕೊಹ್ಲಿಯನ್ನೇ ಹಿಂದಿಕ್ಕಿದ ಸ್ಮೃತಿ ಮಂಧಾನ
Smriti Mandhana Breaks Virat Kohli's Record: 2025 ರ ಮಹಿಳಾ ಏಕದಿನ ವಿಶ್ವಕಪ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಸ್ಮೃತಿ ಮಂಧಾನಾ 66 ಎಸೆತಗಳಲ್ಲಿ 80 ರನ್ ಗಳಿಸಿ ಮಿಂಚಿದರು. ಈ ಇನ್ನಿಂಗ್ಸ್ ಮೂಲಕ ಅವರು ಏಕದಿನ ಕ್ರಿಕೆಟ್‌ನಲ್ಲಿ 5,000 ರನ್‌ಗಳನ್ನು ಪೂರೈಸಿದರು. 112 ಇನ್ನಿಂಗ್ಸ್‌ಗಳಲ್ಲಿ ಈ ಮೈಲಿಗಲ್ಲು ತಲುಪುವ ಮೂಲಕ, ಮಂಧಾನಾ ವಿರಾಟ್ ಕೊಹ್ಲಿ (114 ಇನ್ನಿಂಗ್ಸ್) ದಾಖಲೆಯನ್ನು ಮುರಿದು, ಭಾರತದ ಪರ ವೇಗವಾಗಿ 5,000 ಏಕದಿನ ರನ್ ಗಳಿಸಿದ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು.
2025 ರ ಮಹಿಳಾ ಏಕದಿನ ವಿಶ್ವಕಪ್‌ನಲ್ಲಿ ಭಾರತ ತಂಡ ಆಸ್ಟ್ರೇಲಿಯಾವನ್ನು ಎದುರಿಸುತ್ತಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಆಸ್ಟ್ರೇಲಿಯಾಕ್ಕೆ 331 ರನ್‌ಗಳ ಗುರಿಯನ್ನು ನೀಡಿದೆ. ಈ ಪಂದ್ಯದಲ್ಲಿ ಭಾರತದ ಪರ ಸ್ಮೃತಿ ಮಂಧಾನ ಅತ್ಯಧಿಕ ಅಂದರೆ 66 ಎಸೆತಗಳಲ್ಲಿ 80 ರನ್ ಕಲೆಹಾಕಿದರು. ಈ ಇನ್ನಿಂಗ್ಸ್ ಮೂಲಕ ಮಂಧಾನ ಏಕದಿನ ಕ್ರಿಕೆಟ್‌ನಲ್ಲಿ 5,000 ರನ್‌ಗಳನ್ನು ಸಹ ಪೂರೈಸಿದರು. ಇದರೊಂದಿಗೆ ಭಾರತದ ಪರ ಏಕದಿನ ಕ್ರಿಕೆಟ್‌ನಲ್ಲಿ ವೇಗವಾಗಿ 5,000 ರನ್ ಪೂರೈಸಿದ (ಪುರುಷ ಮತ್ತು ಮಹಿಳಾ ಇಬ್ಬರೂ) ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು.
ಸ್ಮೃತಿ ಮಂಧಾನಾ 112 ಇನ್ನಿಂಗ್ಸ್‌ಗಳಲ್ಲಿ ಏಕದಿನ ಕ್ರಿಕೆಟ್‌ನಲ್ಲಿ 5,000 ರನ್‌ಗಳನ್ನು ಪೂರೈಸಿದ್ದು, ಈ ಮೂಲಕ ಭಾರತ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ದಾಖಲೆಯನ್ನು ಮುರಿದಿದ್ದಾರೆ. ವಿರಾಟ್ ಕೊಹ್ಲಿ 114 ಇನ್ನಿಂಗ್ಸ್‌ಗಳಲ್ಲಿ 5000 ರನ್ ಪೂರೈಸಿದ್ದರು. ಸ್ಮೃತಿ 112 ಇನ್ನಿಂಗ್ಸ್‌ಗಳಲ್ಲಿ 5000 ರನ್ ಗಡಿ ದಾಟಿ ವಿರಾಟ್ ಕೊಹ್ಲಿ ದಾಖಲೆಯನ್ನು ಮುರಿದಿದ್ದಾರೆ. ಇನ್ನು ಈ ಪಟ್ಟಿಯಲ್ಲಿ ಟೀಂ ಇಂಡಿಯಾದ ಮಾಜಿ ಆರಂಭಿಕ ಆಟಗಾರ ಶಿಖರ್ ಧವನ್ ಮೂರನೇ ಸ್ಥಾನದಲ್ಲಿದ್ದಾರೆ. ಅವರು 118 ಇನ್ನಿಂಗ್ಸ್‌ಗಳಲ್ಲಿ 5,000 ಏಕದಿನ ರನ್‌ಗಳನ್ನು ಪೂರೈಸಿದ್ದರು.

