ಆಸೀಸ್ ವಿರುದ್ಧ ವೇಗದ ಶತಕ ಸಿಡಿಸಿ ಕೊಹ್ಲಿ, ಸೆಹ್ವಾಗ್ ದಾಖಲೆ ಮುರಿದ ಸ್ಮೃತಿ ಮಂಧಾನ
Smriti Mandhana's Record-Breaking Century: ಭಾರತ ಮಹಿಳಾ ತಂಡದ ಉಪನಾಯಕಿ ಸ್ಮೃತಿ ಮಂಧಾನ ಅವರು ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿದ್ದಾರೆ. ಕೇವಲ 50 ಎಸೆತಗಳಲ್ಲಿ ಶತಕ ಬಾರಿಸಿ ವಿರಾಟ್ ಕೊಹ್ಲಿ ಮತ್ತು ವೀರೇಂದ್ರ ಸೆಹ್ವಾಗ್ ಅವರ ದಾಖಲೆಯನ್ನು ಮುರಿದಿದ್ದಾರೆ. ಮಹಿಳಾ ಏಕದಿನ ಕ್ರಿಕೆಟ್‌ನಲ್ಲಿ ಅತಿ ವೇಗದ ಶತಕಗಳ ಪಟ್ಟಿಯಲ್ಲಿ ಎರಡನೇ ಸ್ಥಾನ ಪಡೆದಿದ್ದಾರೆ.
ಆಸ್ಟ್ರೇಲಿಯಾ ವನಿತಾ ತಂಡದ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಭಾರತ ಮಹಿಳಾ ತಂಡದ ಉಪನಾಯಕಿ ಸ್ಮೃತಿ ಮಂಧಾನ ಸ್ಫೋಟಕ ಶತಕ ಸಿಡಿಸಿ ಏಕದಿನ ಕ್ರಿಕೆಟ್‌ನಲ್ಲಿ ಇತಿಹಾಸ ನಿರ್ಮಿಸಿದ್ದಾರೆ. ಆಸ್ಟ್ರೇಲಿಯಾ ಮಹಿಳಾ ತಂಡದ ವಿರುದ್ಧ ಕೇವಲ 50 ಎಸೆತಗಳಲ್ಲಿ ಶತಕ ಬಾರಿಸುವ ಮೂಲಕ ವಿರಾಟ್ ಕೊಹ್ಲಿ ಹಾಗೂ ವೀರೇಂದ್ರ ಸೆಹ್ವಾಗ್ ಅವರ ದಾಖಲೆಯನ್ನು ಮುರಿದಿದ್ದಾರೆ. ವಾಸ್ತವವಾಗಿ ವಿರಾಟ್ ಕೊಹ್ಲಿ 2013 ರಲ್ಲಿ ಆಸ್ಟ್ರೇಲಿಯಾ ವಿರುದ್ಧ 52 ಎಸೆತಗಳಲ್ಲಿ ಶತಕ ಬಾರಿಸಿದ್ದರು. ಹಾಗೆಯೇ ಸೆಹ್ವಾಗ್ ಕೂಡ ಕಾಂಗರೂ ತಂಡದ ವಿರುದ್ಧ ಶತಕ ಸಿಡಿಸಿದ್ದರು. ಈಗ ಸ್ಮೃತಿ ಮಂಧಾನ ಇವರಿಬ್ಬರ ದಾಖಲೆಯನ್ನು ಮುರಿದಿದ್ದಾರೆ. ಇದಲ್ಲದೆ, ಮಹಿಳಾ ಏಕದಿನ ಪಂದ್ಯದಲ್ಲಿ ಅತಿ ವೇಗದ ಶತಕ ಸಿಡಿಸಿದ ವಿಶ್ವದ ಎರಡನೇ ಮಹಿಳಾ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಸ್ಮೃತಿ ಪಾತ್ರರಾಗಿದ್ದಾರೆ.
Latest Videos
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

