4,4,4,4,6,4,4..! ಸತತ 7 ಎಸೆತಗಳಲ್ಲಿ 7 ಬೌಂಡರಿ ಬಾರಿಸಿದ ಸ್ಮೃತಿ; ವಿಡಿಯೋ ನೋಡಿ

4,4,4,4,6,4,4..! ಸತತ 7 ಎಸೆತಗಳಲ್ಲಿ 7 ಬೌಂಡರಿ ಬಾರಿಸಿದ ಸ್ಮೃತಿ; ವಿಡಿಯೋ ನೋಡಿ

ಪೃಥ್ವಿಶಂಕರ
|

Updated on: Dec 19, 2024 | 7:59 PM

Smriti Mandhana: ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಸ್ಮೃತಿ ಮಂಧಾನ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದರು. ಮಂಧಾನ ಸತತ 7 ಎಸೆತಗಳಲ್ಲಿ ಬೌಂಡರಿ ಬಾರಿಸುವ ಮೂಲಕ ಮೈದಾನದಲ್ಲಿ ನೆರೆದಿದ್ದವರು ಹುಚ್ಚೆದ್ದು ಕುಣಿಯುವಂತೆ ಮಾಡಿದರು. ಅತ್ಯುತ್ತಮ ಫಾರ್ಮ್‌ನಲ್ಲಿರುವ ಸ್ಮೃತಿ ವೆಸ್ಟ್ ಇಂಡೀಸ್ ವಿರುದ್ಧ ಹ್ಯಾಟ್ರಿಕ್ ಅರ್ಧಶತಕ ಕೂಡ ಬಾರಿಸಿದ್ದಾರೆ.

ವೆಸ್ಟ್ ಇಂಡೀಸ್ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಟೀಂ ಇಂಡಿಯಾದ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ ರನ್​ಗಳ ಶಿಖರ ಕಟ್ಟಿದ್ದಾರೆ. ವಿಂಡೀಸ್ ವಿರುದ್ಧದ ಈ ಸರಣಿಯಲ್ಲಿ ಸತತ ಎರಡು ಅರ್ಧಶತಕ ಸಿಡಿಸಿದ್ದ ಸ್ಮೃತಿ ಇದೀಗ ಮೂರನೇ ಪಂದ್ಯದಲ್ಲೂ ಅಜೇಯ ಅರ್ಧಶತಕದ ಇನ್ನಿಂಗ್ಸ್ ಆಡಿದ್ದಾರೆ. ಅದರಲ್ಲೂ ಈ ಪಂದ್ಯದಲ್ಲಿ ಸ್ಮೃತಿ ಸತತ 7 ಬೌಂಡರಿಗಳನ್ನು ಬಾರಿಸುವ ಮೂಲಕ ಮೈದಾನದಲ್ಲಿ ನೆರೆದಿದ್ದವರು ಹುಚ್ಚೆದು ಕುಣಿಯುವಂತೆ ಮಾಡಿದ್ದಾರೆ.

ಸತತ 7 ಬೌಂಡರಿ

ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡುತ್ತಿರುವ ಟೀಂ ಇಂಡಿಯಾ ಪರ ಇನ್ನಿಂಗ್ಸ್ ಆರಂಭಿಸಿದ್ದ ಸ್ಮೃತಿ ಮಂಧಾನ ಮೂರು ಮತ್ತು ನಾಲ್ಕನೇ ಓವರ್‌ಗಳಲ್ಲಿ ಸತತ 7 ಬೌಂಡರಿ ಹೊಡೆದ ಸಾಧನೆ ಮಾಡಿದರು. ಮೂರನೇ ಓವರ್ ಎಸೆದ ಹೆನ್ರಿ ಅವರ ನಾಲ್ಕನೇ ಎಸೆತದಲ್ಲಿ ಮಂಧಾನ ಬೌಂಡರಿ ಬಾರಿಸಿದರು. ಆ ಬಳಿಕ ಐದು ಮತ್ತು ಆರನೇ ಎಸೆತಗಳಲ್ಲಿಯೂ ಬೌಂಡರಿ ಬಾರಿಸಿದರು. ಇದರ ನಂತರ, ನಾಲ್ಕನೇ ಓವರ್‌ನ ಎರಡನೇ ಎಸೆತದಲ್ಲಿ ಸ್ಟ್ರೈಕ್ ಪಡೆದ ಸ್ಮೃತಿ, ಎರಡನೇ ಎಸೆತದಲ್ಲಿ ಬೌಂಡರಿ, ಮೂರನೇ ಎಸೆತದಲ್ಲಿ ಸಿಕ್ಸರ್, ನಾಲ್ಕನೇ ಎಸೆತದಲ್ಲಿ ಬೌಂಡರಿ ಮತ್ತು ನಂತರ ಐದನೇ ಎಸೆತದಲ್ಲಿ ಬೌಂಡರಿ ಬಾರಿಸಿದರು. ಈ ಮೂಲಕ ಮಂಧಾನ ಸತತ 7 ಬೌಂಡರಿ ಬಾರಿಸಿದರು.

ಮಂಧಾನ ವಿಶೇಷ ಹ್ಯಾಟ್ರಿಕ್ ಸಾಧನೆ

ಸ್ಮೃತಿ ಮಂಧಾನ ಅವರು ಸತತ 7 ಬೌಂಡರಿಗಳನ್ನು ಬಾರಿಸಿದ್ದು ಮಾತ್ರವಲ್ಲದೆ ಕೇವಲ 27 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಈ ಸರಣಿಯಲ್ಲಿ ಇದು ಮಂಧಾನ ಅವರ ಮೂರನೇ ಅರ್ಧಶತಕ ಎಂಬುದು ದೊಡ್ಡ ವಿಷಯ. ಈ ಮೂಲಕ ಹ್ಯಾಟ್ರಿಕ್ ಅರ್ಧ ಶತಕ ಬಾರಿಸಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ