ಪವನ್ ಕಲ್ಯಾಣ್ ಜತೆ ಬೆಂಗಳೂರಿಗೆ ಬಂದ ಅಧಿಕಾರಿ ಕಾರಿನಲ್ಲಿ ಹೆಬ್ಬಾವು ಪ್ರತ್ಯಕ್ಷ, ವಿಡಿಯೋ ನೋಡಿ
ಅರಣ್ಯ ಇಲಾಖೆ ಸಭೆ ಹಿನ್ನೆಲೆ ಬೆಂಗಳೂರಿಗೆ ಪವನ್ ಕಲ್ಯಾಣ್ ಆಗಮಿಸಿದ್ದಾರೆ. ಸಭೆ ಆರಂಭಕ್ಕೂ ಮುನ್ನ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಕೆಲ ಸಮಯ ಮಾತುಕತೆ ನಡೆಸಿದ್ದಾರೆ. ಬಳಿಕ ಮಲ್ಲೇಶ್ವರಂನಲ್ಲಿರುವ ಅರಣ್ಯ ಭವನಕ್ಕೆ ತೆರಳಿದ್ದಾರೆ. ಈ ವೇಳೆ ಪವನ್ ಕಲ್ಯಾಣ್ ಜೊತೆಗೆ ಬಂದಿದ್ದ ಆಂಧ್ರ ಪ್ರದೇಶ ಸರ್ಕಾರಿ ಅಧಿಕಾರಿ ಕಾರಿನಲ್ಲಿ ಹೆಬ್ಬಾವಿನ ಮರಿ ಪ್ರತ್ಯಕ್ಷವಾಗಿದೆ.
ಬೆಂಗಳೂರು, (ಆಗಸ್ಟ್ 08): ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಮತ್ತು ತೆಲುಗು ನಟ ಪವನ್ ಕಲ್ಯಾಣ್ (Pawan Kalyan) ಇಂದು (ಆ.8) ಬೆಂಗಳೂರಿಗೆ ಆಗಮಿಸಿದ್ದು, ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ಅವರನ್ನು ಭೇಟಿಯಾಗಿ ಕುಶಲೋಪರಿ ವಿಚಾರಿಸಿದರು. ಬಳಿಕ ಅರಣ್ಯ ಸಚಿವ ಈಶ್ವರ್ ಖಂಡ್ರೆ ಜೊತೆಗೆ ಮಲ್ಲೇಶ್ವರಂನಲ್ಲಿರುವ ಅರಣ್ಯ ಭವನಕ್ಕೆ ತೆರಳಿದ್ದಾರೆ. ಈ ವೇಳೆ ಸರ್ಕಾರಿ ಅಧಿಕಾರಿಯೊಬ್ಬರ ಕಾರಿನೊಳಗೆ ಹೆಬ್ಬಾವಿನ ಮರಿ ಪ್ರತ್ಯಕ್ಷವಾಗಿದೆ. ಹೌದು….ಪವನ್ ಕಲ್ಯಾಣ್ ಜೊತೆಗೆ ಆಗಮಿಸಿರುವ ಆಂಧ್ರ ಪ್ರದೇಶದ ಸರ್ಕಾರಿ ಅಧಿಕಾರಿ ಕಾರಿನೊಳಗೆ ಸುಮಾರು ಒಂದರಿಂದ ಒಂದೂವರೆ ಅಡಿ ಇರುವ ಹೆಬ್ಬಾವು ಕಾಣಿಸಿಕೊಂಡಿದೆ. ಹೆಬ್ಬಾವನ್ನು ಕಾಣುತ್ತಲೇ ಅರಣ್ಯಾಧಿಕಾರಿಗಳು ಸೆರೆ ಹಿಡಿದರು. ಬಳಿಕ ಹಾವನ್ನು ತೆಗೆದುಕೊಂಡು ಹೋಗಿ ಸಚಿವ ಈಶ್ವರ್ ಖಂಡ್ರೆ ಅವರಿಗೆ ತೋರಿಸಿದರು.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ