ಮಹಿಳೆ ಬಟ್ಟೆ ವಾಷ್​ಗೆ ಹಾಕಲು ಬಂದಾಗ ವಾಷಿಂಗ್ ಮಷಿನ್ ಒಳಗೆ ಬೆಚ್ಚಗೆ ಮಲಗಿತ್ತು ಹಾವು! ಆಮೇಲೇನಾಯ್ತು ನೋಡಿ

Edited By:

Updated on: Apr 07, 2026 | 2:36 PM

ಚಾಮರಾಜನಗರದ ಬೂದಿತಿಟ್ಟು ಗ್ರಾಮದಲ್ಲಿ ಬಿಸಿಲಿನ ಬೇಗೆಗೆ ತಂಪು ಅರಸಿ ವಾಷಿಂಗ್ ಮಿಷನ್ ಸೇರಿದ್ದ ಹಾವನ್ನು ನೋಡಿ ಮಹಿಳೆ ಗಾಬರಿಯಾಗಿದ್ದಾರೆ. ಸ್ಥಳಕ್ಕೆ ಬಂದ ಉರಗ ತಜ್ಞ ಸ್ನೇಕ್ ಚಾಂಪು ಹಾವನ್ನು ರಕ್ಷಿಸಿದ್ದು, ಬೇಸಿಗೆಯಲ್ಲಿ ಹಾವುಗಳ ಬಗ್ಗೆ ಎಚ್ಚರಿಕೆ ವಹಿಸಲು ಸೂಚಿಸಿದ್ದಾರೆ. ಸದ್ಯ ವಾಷಿಂಗ್ ಮಷಿನ್​ನಿಂದ ಹಾವು ರಕ್ಷಣೆಯ ವಿಡಿಯೋ ಇಲ್ಲಿದೆ.

ಚಾಮರಾಜನಗರ, ಏಪ್ರಿಲ್ 7: ಚಾಮರಾಜನಗರ ಜಿಲ್ಲೆಯ ಬೂದಿತಿಟ್ಟು ಗ್ರಾಮದ ಬಿಳಿಗಿರಿ ಎಂಬುವವರ ಮನೆಯಲ್ಲಿ ಅಚ್ಚರಿಯ ಘಟನೆಯೊಂದು ನಡೆದಿದೆ. ಮನೆಯ ಹೊರಾಂಗಣದಲ್ಲಿದ್ದ ವಾಷಿಂಗ್ ಮಿಷನ್‌ನಲ್ಲಿ ಬಟ್ಟೆ ಒಗೆಯ ಹಾಕಲು ಹೋದ ಮಹಿಳೆಗೆ ಮಿಷನ್ ಒಳಗಿದ್ದ ಹಾವನ್ನು ನೋಡಿ ಶಾಕ್ ಆಗಿದೆ. ಬಿಸಿಲಿನ ಬೇಗೆಯಿಂದ ತಂಪಾದ ಜಾಗ ಅರಸಿ ಬಂದಿದ್ದ ನೀರುಹಾವು ಇದಾಗಿದ್ದು, ಉರಗ ತಜ್ಞ ಸ್ನೇಕ್ ಚಾಂಪು ಅವರು ಅದನ್ನು ರಕ್ಷಿಸಿದ್ದಾರೆ. ಬೇಸಿಗೆಯಲ್ಲಿ ಹಾವುಗಳ ಬಗ್ಗೆ ಎಚ್ಚರಿಕೆ ವಹಿಸುವಂತೆ ಅವರು ಮನವಿ ಮಾಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸೂರಜ್ ಪ್ರಸಾದ್ ಎಸ್ಎನ್

ಸೂರಜ್ ಪ್ರಸಾದ್ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯವರು. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದಾರೆ. 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದರು. ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದಾರೆ. ಟಿವಿ9 ಕನ್ನಡ ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು ಇವರ ಹವ್ಯಾಸ.

Read More