ಮನೆಯಲ್ಲಿದ್ದ ಹಳೆಯ ಟಿವಿಯೊಳಗಿತ್ತು 8 ಅಡಿ ಉದ್ದದ ಬೃಹತ್ ಹಾವು! ಮನೆಮಂದಿ ಶಾಕ್; ವಿಡಿಯೋ ನೋಡಿ

Edited By:

Updated on: Mar 27, 2026 | 7:17 AM

ಚಾಮರಾಜನಗರದ ಮಲ್ಲಯ್ಯನಪುರ ಗ್ರಾಮದ ಮನೆಯೊಂದರಲ್ಲಿ ಬಳಸದ ಹಳೆಯ ಟಿವಿಯೊಳಗೆ ಸುಮಾರು 8 ಅಡಿ ಉದ್ದದ ಕೇರೆಹಾವು ಸೇರಿಕೊಂಡಿದ್ದ ಘಟನೆ ಬೆಳಕಿಗೆ ಬಂದಿದೆ. ಟಿವಿಯೊಳಗೆ ಹಾವಿನ ಚಲನವಲನ ಕಂಡು ಬೆಚ್ಚಿಬಿದ್ದ ನಿವಾಸಿಗಳು ತಕ್ಷಣ ಉರಗ ತಜ್ಞ ಸ್ನೇಕ್ ಚಾಂಪ್ ಅವರಿಗೆ ಮಾಹಿತಿ ನೀಡಿದ್ದಾರೆ. ಅಂತಿಮವಾಗಿ ಹಾವನ್ನು ಸುರಕ್ಷಿತವಾಗಿ ಸೆರೆಹಿಡಿದು ಕಾಡಿಗೆ ಬಿಡಲಾಗಿದ್ದು, ಈ ರೋಚಕ ಕಾರ್ಯಾಚರಣೆಯ ವಿಡಿಯೋ ಇಲ್ಲಿದೆ.

ಚಾಮರಾಜನಗರ, ಮಾರ್ಚ್ 27: ಉಪಯೋಗಿಸದೇ ಇದ್ದ ಟಿವಿಯೊಳಗೆ ಭಾರೀ ಹಾವು ಅಡಗಿದ್ದ ಘಟನೆ ಚಾಮರಾಜನಗರ ತಾಲೂಕಿನ ಮಲ್ಲಯ್ಯನಪುರ ಗ್ರಾಮದ ದೊಡ್ಡಮಾದಪ್ಪ ಎಂಬವರ ಮನೆಯಲ್ಲಿ ನಡೆದಿದೆ. ಈ ದೃಶ್ಯ ಕಂಡು ಮನೆಮಂದಿ ಬೆಚ್ಚಿಬಿದ್ದಿದ್ದು, ಬಳಿಕ ಉರಗ ತಜ್ಞರ ಸಹಾಯದಿಂದ ಹಾವನ್ನು ಸುರಕ್ಷಿತವಾಗಿ ರಕ್ಷಿಸಿ ಕಾಡಿಗೆ ಬಿಡಲಾಗಿದೆ. ಹಳೆಯ ಟಿವಿಯೊಳಗೆ ಸುಮಾರು 8 ಅಡಿ ಉದ್ದದ ಕೇರೆಹಾವು ಸೇರಿಕೊಂಡಿತ್ತು. ಟಿವಿಯೊಳಗೆ ಹಾವು ಇರುವುದನ್ನು ಗಮನಿಸಿದ ಮನೆಮಂದಿ ಭಯಗೊಂಡು ತಕ್ಷಣವೇ ಉರಗ ತಜ್ಞರಾದ ಸ್ನೇಕ್ ಚಾಂಪ್ ಅವರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಸ್ನೇಕ್ ಚಾಂಪ್, ಎಚ್ಚರಿಕೆಯಿಂದ ಕಾರ್ಯಾಚರಣೆ ನಡೆಸಿ ಹಾವನ್ನು ಸುರಕ್ಷಿತವಾಗಿ ಹಿಡಿದು ಹೊರತೆಗೆದರು. ಬಳಿಕ ಹಾವನ್ನು ಯಾವುದೇ ಹಾನಿಯಾಗದಂತೆ ಸಮೀಪದ ಕಾಡಿಗೆ ಬಿಡಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸೂರಜ್ ಪ್ರಸಾದ್ ಎಸ್.ಎನ್

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More