ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ

Edited By:

Updated on: Apr 03, 2026 | 10:59 AM

ಕೋರ್ಟ್ ಹಾಲ್​ನಲ್ಲಿದ್ದ ದಾಖಲೆಗಳ ಕಬೋರ್ಡ್​​ನಲ್ಲಿ ಹಾವು ಕಂಡು ಸಿಬ್ಬಂದಿ ಬೆಚ್ಚಿಬಿದ್ದ ಘಟನೆ ಕೋಲಾರದ ಸೆಷನ್ಸ್ ಕೋರ್ಟ್ ಒಳಗೆ ನಡೆದಿದೆ. ಸ್ಥಳಕ್ಕೆ ಆಗಮಿಸಿದ ಉರಗ ರಕ್ಷಕ ನಾಗರಾಜ್, ಹಾವನ್ನು ಹಿಡಿದು ಸುರಕ್ಷಿತ ಸ್ಥಳಕ್ಕೆ ಬಿಟ್ಟಿದ್ದಾರೆ. ಹಾವು ಸೆರೆ ಕಾರ್ಯಾಚರಣೆಯ ವಿಡಿಯೋ ಇಲ್ಲಿದೆ ನೋಡಿ.

ಕೋಲಾರ, ಏಪ್ರಿಲ್ 3: ಕೋಲಾರದ ಸೆಷನ್ಸ್ ಕೋರ್ಟ್​ ಒಳಗೆ ಕಬೋರ್ಡ್​​ನಲ್ಲಿ ದಾಖಲೆಗಳ ಮಧ್ಯೆ ಹಾವು ಕಾಣಿಸಿಕೊಂಡು ಸಿಬ್ಬಂದಿ ಬೆಚ್ಚಿಬಿದ್ದಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ ಉರಗ ರಕ್ಷಕ ನಾಗರಾಜ್, ಅದು ಕೇರೆ ಹಾವು ಎಂಬುದನ್ನು ಗಮನಿಸಿದ್ದು, ಅದನ್ನು ಹಿಡಿದು ಸುರಕ್ಷಿತ ಸ್ಥಳಕ್ಕೆ ಬಿಟ್ಟಿದ್ದಾರೆ. ಅಲ್ಲದೆ, ಕೇರೆ ಹಾವಿನ ಬಗ್ಗೆ ಜಾಗೃತಿಯ ಮಾತುಗಳನ್ನಾಡಿದ್ದಾರೆ. ಸದ್ಯ ಈ ವಿಡಿಯೋ ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ

18 ವರ್ಷಗಳ ಹಿಂದೆ ಉತ್ತಮ ಸಮಾಜಕ್ಕಾಗಿ ಟಿವಿ9 ಚಾನೆಲ್​​ ಆರಂಭವಾದಾಗಿನಿಂದ ನನ್ನ ಮಾಧ್ಯಮ ಕಾಯಕವೂ ಆರಂಭ ಪಡೆಯಿತು. ಸ್ನಾತಕೋತ್ತರ ಪದವಿ ಮುಗಿಸಿದ್ದ ನಾನು ಚಿನ್ನದ ನಾಡು, ಕೃಷಿಕರ ಬೀಡು ಕೋಲಾರ ಜಿಲ್ಲೆಯ ಹಿರಿಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಟಿವಿ9 ಸಂಸ್ಥೆಯ ಆಶೋತ್ತರಗಳಿಗೆ ತಕ್ಕಂತೆ ಕೋಲಾರ ಜನತೆಯ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ನನ್ನದು ಸಾಮಾಜಿಕ ಕಳಕಳಿ ಇರುವ ಟಿವಿ9 ಸಂಸ್ಥೆಯಲ್ಲಿ ಕೆಲಸ ಅನ್ನೋದಕ್ಕಿಂತ ಉತ್ತಮ ಸಮಾಜಕ್ಕಾಗಿ ನನ್ನ ಸೇವೆ ಅನ್ನುವ ಭಾವನೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ.

Read More