ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಗದಗ, ಜನವರಿ 30: ಜಿಲ್ಲೆಯ ಲಕ್ಕುಂಡಿ ಗ್ರಾಮದ ಕೋಟೆ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ನಡೆಯುತ್ತಿರುವ ಪುರಾತತ್ವ ಉತ್ಖನನ ಕಾರ್ಯದಲ್ಲಿ ಹಾವು ಪತ್ತೆಯಾಗಿರುವುದು ಸ್ಥಳೀಯರಲ್ಲಿ ಆತಂಕ ಮತ್ತು ಕುತೂಹಲ ಮೂಡಿಸಿದೆ. ಕಳೆದ 13 ದಿನಗಳಿಂದ ನಿರಂತರವಾಗಿ ನಡೆಯುತ್ತಿರುವ ಈ ಉತ್ಖನನದಲ್ಲಿ ಈವರೆಗೆ 45ಕ್ಕೂ ಹೆಚ್ಚು ಪ್ರಾಚ್ಯಾವಶೇಷ ವಸ್ತುಗಳು, ನಿರ್ದಿಷ್ಟವಾಗಿ ಮೂರು ನಾಗರಶಿಲೆಗಳು ಪತ್ತೆಯಾಗಿದ್ದವು. ನಿನ್ನೆ ಮೂರು ಹೆಡೆಯ ಸರ್ಪ ಶಿಲೆ ದೊರೆತ ಬೆನ್ನಲ್ಲೇ, ಇಂದು ಬೆಳಗ್ಗೆ ಉತ್ಖನನ ಸ್ಥಳದ ಎ ಬ್ಲಾಕ್‌ನಲ್ಲಿ ಸುಮಾರು 2-2.5 ಅಡಿ ಉದ್ದದ ಹಾವು ಪ್ರತ್ಯಕ್ಷವಾಗಿದೆ. ಈ ಘಟನೆ ಲಕ್ಕುಂಡಿಯ ನಿಧಿಗಳನ್ನು ಸರ್ಪಗಳು ಕಾಯುತ್ತವೆ ಎಂಬ ಸ್ಥಳೀಯರ ನಂಬಿಕೆ ಮತ್ತು ಚರ್ಚೆಗಳಿಗೆ ಹೊಸ ಆಯಾಮ ನೀಡಿದೆ. ಬೆಳಗ್ಗೆ 8:30ರ ಸುಮಾರಿಗೆ ಹಾವು ಕಾಣಿಸಿಕೊಂಡಿದ್ದು, ಸ್ಥಳೀಯ ಸೆಕ್ಯೂರಿಟಿ ಗಾರ್ಡ್‌ಗಳು ಮತ್ತು ನಿವಾಸಿಗಳು ಇದನ್ನು ಕಣ್ಣಾರೆ ಕಂಡಿದ್ದಾರೆ ಹಾಗೂ ವಿಡಿಯೋ ಸಹ ಸೆರೆಹಿಡಿದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
ನದಿಗೆ ಬಿದ್ದ ಪ್ಯಾರಾಗ್ಲೈಡರ್ಗಳು, ಹೇಗೋ ಅಪಾಯದಿಂದ ಪಾರು
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್ಪೆಕ್ಟರ್!
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!