ಬಾಗಲಕೋಟೆ: ಲೋಕಾಯುಕ್ತ ದಾಳಿ ವೇಳೆ ಮನೆಗೆ ನುಗ್ಗಿದ ಹಾವು!

Edited By:

Updated on: Mar 05, 2026 | 9:25 AM

ಬಾಗಲಕೋಟೆಯಲ್ಲಿ ಲೋಕಾಯುಕ್ತ ದಾಳಿ ವೇಳೆ ಅಚ್ಚರಿಯ ಘಟನೆ ನಡೆದಿದೆ. ಅಧಿಕಾರಿಗಳು ಶೋಧ ಕಾರ್ಯ ನಡೆಸುತ್ತಿದ್ದಾಗ ಮನೆಯ ಕೆಳಮಹಡಿಗೆ ಕೆರೆ ಹಾವು ನುಗ್ಗಿದ್ದು ಕೆಲಕಾಲ ಆತಂಕ ಸೃಷ್ಟಿಸಿತು. ಅಕ್ರಮ ಆಸ್ತಿ ಆರೋಪದಡಿ ಹಲವೆಡೆ ಏಕಕಾಲದಲ್ಲಿ ದಾಳಿ ಮುಂದುವರಿದಿದೆ. ಹಾವು ಕಾಣಿಸಿಕೊಂಡ ವಿಡಿಯೋ ಇಲ್ಲಿದೆ ನೋಡಿ.

ಬಾಗಲಕೋಟೆ, ಮಾರ್ಚ್​ 5: ಅಕ್ರಮ ಆಸ್ತಿ ಗಳಿಕೆ ಆರೋಪದಡಿ ಲೋಕಾಯುಕ್ತ ಅಧಿಕಾರಿಗಳು ಬಾಗಲಕೋಟೆಯಲ್ಲಿ ನಡೆಸಿದ ದಾಳಿಯ ವೇಳೆ ಅಚ್ಚರಿಯ ಘಟನೆ ನಡೆದಿದೆ. ಮನೆಯೊಂದರಲ್ಲಿ ಶೋಧ ಕಾರ್ಯ ನಡೆಯುತ್ತಿದ್ದಾಗ ಕೆಳಮಹಡಿಗೆ ಕೆರೆ ಹಾವು ನುಗ್ಗಿ ಕೆಲಕಾಲ ಗೊಂದಲ ಉಂಟುಮಾಡಿತು. ಬಳಿಕ ಮನೆಯವರು ಹಾವನ್ನು ಹೊಡೆದು ದೂರ ಸಾಗಿಸಿದ್ದಾರೆ. ಲೋಕಾಯುಕ್ತ ಅಧಿಕಾರಿಗಳು ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಮುಖ್ಯ ಎಂಜಿನಿಯರ್ ವಸಂತ್ ವಾಲಪ್ಪ ನಾಯಕ್ ಅವರ ವಿರುದ್ಧ ದಾಖಲಾಗಿದ್ದ ದೂರಿನ ಆಧಾರದಲ್ಲಿ ಅವರ ಸಂಬಂಧಿಕರ ಮನೆಗಳ ಮೇಲೂ ದಾಳಿ ನಡೆಸಿದರು. ಬಾಗಲಕೋಟೆಯ ಪೋಸ್ಟಲ್ ಕಾಲೋನಿಯಲ್ಲಿರುವ ವಸಂತ್ ಅವರ ಸಹೋದರ ಭೀಮಸಿಂಗ್ ನಾಯಕ್ ನಿವಾಸದ ಮೇಲೆ ಅಧಿಕಾರಿಗಳು ದಾಳಿ ನಡೆಸಿ ಶೋಧ ಕಾರ್ಯ ಕೈಗೊಂಡರು.

ಭೀಮಸಿಂಗ್ ನಾಯಕ್ ಬಾಗಲಕೋಟೆ ಡಿಎಆರ್‌ನಲ್ಲಿ ಎಎಸ್ಐ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅಲ್ಲದೆ, ಬಾಗಲಕೋಟೆ ತಾಲೂಕಿನ ಬಿಲ್ ಕೆರೂರು ಗ್ರಾಮದ ಮನೆಯಲ್ಲೂ ಅಧಿಕಾರಿಗಳು ಪರಿಶೀಲನೆ ನಡೆಸಿದರು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ವಸಂತ್ ಅವರ ಮನೆ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು ನಗರ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ದೂರಿನ ಆಧಾರದಲ್ಲಿ ಈ ದಾಳಿ ನಡೆದಿದೆ. ಆಸ್ತಿ, ದಾಖಲೆಗಳು ಮತ್ತು ಬ್ಯಾಂಕ್ ವ್ಯವಹಾರಗಳ ಕುರಿತು ಅಧಿಕಾರಿಗಳು ಪರಿಶೀಲನೆ ನಡೆಸಲಾಗುತ್ತಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ರವಿ ಹೆಚ್ ಮೂಕಿ, ಕಲಘಟಗಿ

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More