ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್

Updated on: Mar 26, 2025 | 12:50 PM

ಜೀ ಕನ್ನಡ, ಕಲರ್ಸ್ ಕನ್ನಡದ ಜೊತೆ ಸುವರ್ಣದಲ್ಲೂ ಹೊಸ ಹೊಸ ಧಾರಾವಾಹಿಗಳು ಬರುತ್ತವೆ. ಈಗ ಸುರ್ಣದಲ್ಲಿ ಹೊಸ ಧಾರಾವಾಹಿಯೊಂದು ಬರುತ್ತಿದೆ. ಈ ಬಗ್ಗೆ ಸ್ಟಾರ್ ಸುವರ್ಣ ಪ್ರೋಮೋ ಒಂದನ್ನು ಹಂಚಿಕೊಂಡಿದೆ. ಈ ಪ್ರೋಮೋದಲ್ಲಿ ಚಂದು ಹಾಗೂ ಕಾವ್ಯಾ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ .

ಕಾವ್ಯಾ ಮಹಾದೇವ್ ಹಾಗೂ ಚಂದು ಗೌಡ ಅವರು ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ. ಈ ಧಾರಾವಾಹಿಗೆ ‘ಸ್ನೇಹದ ಕಡಲಲ್ಲಿ’ ಎನ್ನುವ ಟೈಟಲ್ ಇಡಲಾಗಿದೆ. ಈ ಧಾರಾವಾಹಿಯಲ್ಲಿ ಕಥಾ ನಾಯಕಿಗೆ ವಿವಾಹ ಆಗುತ್ತದೆ. ವಿವಾಹ ಆದ ಮೇಲೆ ಪತಿಯ ನಿಜವಾದ ಮುಖ ಗೊತ್ತಾಗುತ್ತದೆ. ಆಗ ನಾಯಕಿಗೆ ಸಹಾಯಕ್ಕೆ ಬರುತ್ತಾನೆ ಕಥಾ ನಾಯಕ. ಈ ಪ್ರೋಮೋನ ಸ್ಟಾರ್ ಸುವರ್ಣ ಹಂಚಿಕೊಂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More