ಮುಡಾ ಹಗರಣದಲ್ಲಿ 100 ಕೋಟಿ ಆಸ್ತಿ ಜಪ್ತಿ: ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ

Updated on: Jun 10, 2025 | 3:32 PM

ರಾಜ್ಯ ರಾಜಕೀಯದಲ್ಲಿ ಮಾತ್ರವಲ್ಲ ಇಡೀ ದೇಶದಲ್ಲೇ ಸಂಚಲನ ಮೂಡಿಸಿದ್ದ ಮುಡಾ ಹಗರಣಕ್ಕೆ ಸಂಬಂಧ ಪಟ್ಟಂತೆ ED (ಜಾರಿ ನಿರ್ದೇಶನಾಲಯ) ಮಹತ್ವದ ಮಾಹಿತಿಯನ್ನು ಬಿಡುಗಡೆ ಮಾಡಿದೆ. ಮುಡಾ ಹಗರಣದಲ್ಲಿ ಇಡಿ ಬರೋಬ್ಬರಿ 100 ಕೋಟಿ ರೂಪಾಯಿ ಮೌಲ್ಯದ 92 ಸೈಟ್‌ಗಳನ್ನು ಜಪ್ ಮಾಡಿದೆ. ಈ ಸಂಬಂಧ ದೂರುದಾರ ಸ್ನೇಹಮಯಿ ಕೃಷ್ಣ ಟಿವಿ9ಗೆ ಪ್ರತಿಕ್ರಿಯಿಸಿದ್ದು, ಮುಡಾ ಕೇಸ್​ನಲ್ಲಿ ಸಿಎಂ ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದಿದ್ದಾರೆ.

ಬೆಂಗಳೂರು, (ಜೂನ್ 10): ರಾಜ್ಯ ರಾಜಕೀಯದಲ್ಲಿ ಮಾತ್ರವಲ್ಲ ಇಡೀ ದೇಶದಲ್ಲೇ ಸಂಚಲನ ಮೂಡಿಸಿದ್ದ ಮುಡಾ ಹಗರಣಕ್ಕೆ ಸಂಬಂಧ ಪಟ್ಟಂತೆ ED (ಜಾರಿ ನಿರ್ದೇಶನಾಲಯ) ಮಹತ್ವದ ಮಾಹಿತಿಯನ್ನು ಬಿಡುಗಡೆ ಮಾಡಿದೆ. ಮುಡಾ ಹಗರಣದಲ್ಲಿ ಇಡಿ ಬರೋಬ್ಬರಿ 100 ಕೋಟಿ ರೂಪಾಯಿ ಮೌಲ್ಯದ 92 ಸೈಟ್‌ಗಳನ್ನು ಜಪ್ ಮಾಡಿದೆ. ಈ ಬಗ್ಗೆ ED (ಜಾರಿ ನಿರ್ದೇಶನಾಲಯ) ಬೆಂಗಳೂರು ಕಚೇರಿಯಿಂದ ಟ್ವೀಟ್ ಮಾಡಿದ್ದು, ಅಧಿಕೃತ ಮಾಹಿತಿ ನೀಡಿದೆ. PMLA (ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ, 2002) ಕಾಯಿದೆಯಡಿ ಸಿಎಂ ಸಿದ್ದರಾಮಯ್ಯ ಹಾಗೂ ಇತರರಿಗೆ ಸೇರಿದ 92 ಸೈಟ್‌ಗಳನ್ನು ಜಪ್ತಿ ಮಾಡಲಾಗಿದೆ.

ಈ ಸಂಬಂಧ ದೂರುದಾರ ಸ್ನೇಹಮಯಿ ಕೃಷ್ಣ ಟಿವಿ9ಗೆ ಪ್ರತಿಕ್ರಿಯಿಸಿದ್ದು, ಮುಂದಿನ 3 ಅಥವಾ 4 ತಿಂಗಳಲ್ಲಿ ರಾಜ್ಯದ ಜನರಿಗೆ ಗೊತ್ತಾಗುತ್ತದೆ. ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯನವರಿಗೆ ಶಿಕ್ಷೆ ಆಗಿಯೇ ಆಗುತ್ತೆ. ಈ ಹಿಂದೆ 300 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿತ್ತು. ಈಗ ಇಡಿ ಮತ್ತೆ 100 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದೆ. ಈ ಮೂಲಕ ಒಟ್ಟು 400 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿಕೊಂಡಿದೆ. ಇನ್ನೂ 800 ಸೈಟ್ ಮುಟ್ಟುಗೋಲು ಹಾಕಿಕೊಳ್ಳುವ ಸಾಧ್ಯತೆಯಿದೆ. ಮುಡಾ ಕೇಸ್​ನಲ್ಲಿ ಸಿಎಂ ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದಿದ್ದಾರೆ.

Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More