ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ: ಸಂಚಲನ ಮೂಡಿಸಿದ ಸ್ನೇಹಮಯಿ ಕೃಷ್ಣ ಆರೋಪ

Updated on: Feb 19, 2026 | 3:10 PM

ಅಧಿಕಾರಿಯೊಬ್ಬರಿಗೆ ಭಡ್ತಿ ನೀಡಲು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ 1.60 ಕೋಟಿ ರೂ. ಲಂಚ ಪಡೆದಿದ್ದಾರೆ ಎಂದು ದೂರುದಾರ ಸ್ನೇಹಮಯಿ ಕೃಷ್ಣ ಗಂಭೀರ ಆರೋಪ ಮಾಡಿದ್ದಾರೆ. ಈ ಸಂಬಂಧ ₹9 ಕೋಟಿ ಅಕ್ರಮ ಹಣ ವರ್ಗಾವಣೆ ನಡೆದಿದ್ದು, ಹಣ ಸಾಗಿಸಿದ ಕಾರಿನ ಫೋಟೋ ಸಹಿತ ದೂರು ಸಲ್ಲಿಸಿದ್ದಾರೆ. ಭ್ರಷ್ಟಾಚಾರ ಪ್ರಕರಣದಲ್ಲಿ ಆರೋಪಿ ಆಗಿರುವ ಅಧಿಕಾರಿಗೆ ಲಂಚ ಪಡೆದು ಭಡ್ತಿ ನೀಡಲಾಗಿದೆ ಎಂಬ ಗಂಭೀರ ಆರೋಪಗಳು ರಾಜ್ಯ ರಾಜಕೀಯ ಮತ್ತು ಆಡಳಿತ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿವೆ. ಈ ಸಂಬಂಧ ದೂರುದಾರ ಸ್ನೇಹಮಯಿ ಕೃಷ್ಣ ಮತ್ತೊಂದು ಮಹತ್ವದ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ.

ಬೆಂಗಳೂರು, (ಫೆಬ್ರವರಿ 19): ಅಧಿಕಾರಿಯೊಬ್ಬರಿಗೆ ಭಡ್ತಿ ನೀಡಲು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ 1.60 ಕೋಟಿ ರೂ. ಲಂಚ ಪಡೆದಿದ್ದಾರೆ ಎಂದು ದೂರುದಾರ ಸ್ನೇಹಮಯಿ ಕೃಷ್ಣ ಗಂಭೀರ ಆರೋಪ ಮಾಡಿದ್ದಾರೆ. ಈ ಸಂಬಂಧ ₹9 ಕೋಟಿ ಅಕ್ರಮ ಹಣ ವರ್ಗಾವಣೆ ನಡೆದಿದ್ದು, ಹಣ ಸಾಗಿಸಿದ ಕಾರಿನ ಫೋಟೋ ಸಹಿತ ದೂರು ಸಲ್ಲಿಸಿದ್ದಾರೆ. ಭ್ರಷ್ಟಾಚಾರ ಪ್ರಕರಣದಲ್ಲಿ ಆರೋಪಿ ಆಗಿರುವ ಅಧಿಕಾರಿಗೆ ಲಂಚ ಪಡೆದು ಭಡ್ತಿ ನೀಡಲಾಗಿದೆ ಎಂಬ ಗಂಭೀರ ಆರೋಪಗಳು ರಾಜ್ಯ ರಾಜಕೀಯ ಮತ್ತು ಆಡಳಿತ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿವೆ. ಈ ಸಂಬಂಧ ದೂರುದಾರ ಸ್ನೇಹಮಯಿ ಕೃಷ್ಣ ಮತ್ತೊಂದು ಮಹತ್ವದ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More