‘ಆಡೋಕೆ ಲಾಯಕ್ಕಿಲ್ಲ ಅಂದ್ರೆ ಹೋಗ್ತಾ ಇರಬೇಕು’; ನಮ್ರತಾ ಹೇಳಿಕೆ ಬಳಿಕ ಬದಲಾದ ಸ್ನೇಹಿತ್​ ನಿರ್ಧಾರ  

Updated on: Dec 06, 2023 | 12:22 PM

ಸ್ನೇಹಿತ್​ ಟಾಸ್ಕ್​​ಗಳ ಉಸ್ತುವಾರಿ ವಹಿಸಬೇಕಿತ್ತು. ಅವರು ಪಕ್ಷಪಾತ ಮಾಡುತ್ತಿದ್ದಾರೆ ಎಂದು ಅನೇಕರು ಆರೋಪಿಸಿದ್ದಾರೆ. ಅದನ್ನು ಅವರು ಪದೇಪದೇ ಸಾಬೀತು ಮಾಡುತ್ತಿದ್ದಾರೆ.

ಬಿಗ್ ಬಾಸ್​ನಲ್ಲಿ ಈ ಬಾರಿ ಗಂಧರ್ವರು ಹಾಗೂ ರಾಕ್ಷಸರು ಎಂದು ಎರಡು ತಂಡಗಳನ್ನು ಮಾಡಲಾಗಿದೆ. ಸ್ನೇಹಿತ್ (Snehith Gowda) ಅವರು ಈ ವಾರದ ಕ್ಯಾಪ್ಟನ್ ಆಗಿದ್ದಾರೆ. ಅವರೇ ಟಾಸ್ಕ್​​ಗಳ ಉಸ್ತುವಾರಿ ವಹಿಸಬೇಕು. ಅವರು ಪಕ್ಷಪಾತ ಮಾಡುತ್ತಿದ್ದಾರೆ ಎಂದು ಅನೇಕರು ಆರೋಪಿಸಿದ್ದಾರೆ. ಅದನ್ನು ಅವರು ಪದೇಪದೇ ಸಾಬೀತು ಮಾಡುತ್ತಿದ್ದಾರೆ. ನೀರು ಸೋಕಿ ಎದುರಾಳಿ ತಂಡದವರನ್ನು ಕುರ್ಚಿಯಿಂದ ಎಬ್ಬಿಸುವ ಟಾಸ್ಕ್ ಇತ್ತು. ಈ ವೇಳೆ ಸರಿಯಾಗಿ ಉಸ್ತುವಾರಿ ನಿರ್ವಹಿಸಿಲ್ಲ ಎನ್ನುವ ಆರೋಪ ವ್ಯಕ್ತವಾಗಿದೆ. ನಮ್ರತಾ ಹೇಳಿದ ನಂತರ ಅವರು ನಿರ್ಧಾರ ಬದಲಿಸಿದ್ದಾರೆ. ‘ಆಡೋಕೆ ಲಾಯಕ್ಕಿಲ್ಲ ಅಂದ್ರೆ ಹೋಗ್ತಾ ಇರಬೇಕು’ ಎಂದು ಕಾರ್ತಿಕ್ ಕೂಗಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published on: Dec 06, 2023 08:51 AM
Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More