ಬಿಗ್ ಬಾಸ್ ಮನೆಗೆ ಎಲಿಮಿನೇಟ್ ಆದ ಸ್ಪರ್ಧಿಗಳ ರೀ ಎಂಟ್ರಿ; ನಮ್ರತಾಗೆ ಕೈಮುಗಿದ ಸ್ನೇಹಿತ್

Updated on: Jan 16, 2024 | 8:33 AM

ನಮ್ರತಾ ಹಾಗೂ ಕಾರ್ತಿಕ್ ಮಧ್ಯೆ ಆಪ್ತತೆ ಬೆಳೆದಿದೆ. ಬಹುಶಃ ಇದರಿಂದ ಸ್ನೇಹಿತ್ ಉರಿದುಕೊಂಡಿರಬಹುದು ಎಂಬುದು ನಮ್ರತಾ ಆಲೋಚನೆ. ಸ್ನೇಹಿತ್ ಕೂಡ ದೊಡ್ಮನೆಗೆ ಬಂದಿದ್ದಾರೆ. ನಮ್ರತಾಗೆ ಸ್ನೇಹಿತ್ ಕೈ ಮುಗಿದಿದ್ದಾರೆ.

‘ಬಿಗ್ ಬಾಸ್ ಕನ್ನಡ ಸೀಸನ್ 10’ ಕೊನೆ ಆಗೋಕೆ ಉಳಿದಿರೋದು ಇನ್ನು ಕೆಲವೇ ದಿನಗಳು ಮಾತ್ರ. ಈ ವೇಳೆ ಸ್ಪರ್ಧಿಗಳ ರೀಯೂನಿಯನ್ ಆಗಿದೆ. ಈ ಸೀಸನ್​ನಲ್ಲಿ ಎಲಿಮಿನೇಟ್ ಆದ ಸ್ಪರ್ಧಿಗಳು ಮತ್ತೆ ದೊಡ್ಮನೆಗೆ ಅತಿಥಿಗಳಾಗಿ ಬಂದಿದ್ದಾರೆ. ಮನೆಯಲ್ಲಿದ್ದ ಸ್ಪರ್ಧಿಗಳಿಗೆ ಇದು ಸರ್​ಪ್ರೈಸ್ ಆಗಿದೆ. ನಮ್ರತಾ (Namratha Gowda) ಹಾಗೂ ಕಾರ್ತಿಕ್ ಮಧ್ಯೆ ಆಪ್ತತೆ ಬೆಳೆದಿದೆ. ಬಹುಶಃ ಇದರಿಂದ ಸ್ನೇಹಿತ್ ಉರಿದುಕೊಂಡಿರಬಹುದು ಎಂಬುದು ನಮ್ರತಾ ಆಲೋಚನೆ. ಸ್ನೇಹಿತ್ ಕೂಡ ದೊಡ್ಮನೆಗೆ ಬಂದಿದ್ದಾರೆ. ನಮ್ರತಾಗೆ ಸ್ನೇಹಿತ್ ಕೈ ಮುಗಿದಿದ್ದಾರೆ. ಈ ಎಪಿಸೋಡ್ ಇಂದು (ಜನವರಿ 16) ಕಲರ್ಸ್ ಕನ್ನಡದಲ್ಲಿ ಪ್ರಸಾರ ಆಗಲಿದೆ. ಜಿಯೋ ಸಿನಿಮಾದಲ್ಲಿ 24 ಗಂಟೆ ಲೈವ್ ವೀಕ್ಷಿಸಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

 

Published on: Jan 16, 2024 08:19 AM
Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More