ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಡಿ.ವಿ. ನಟೇಶ್ ದೂರಿನ ಸಂಬಂಧ ವಿಚಾರಣೆಗಾಗಿ ಕರೆತರಲಾಗಿತ್ತು. ಯಾವುದೇ ಬಂಧನವಾಗಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಸೈಬರ್ ಕ್ರೈಂ ಪೊಲೀಸರ ವಿಚಾರಣೆ ವೇಳೆ, ನಟೇಶ್‌ರ ಆಡಿಯೋ ಹಾಗೂ ಲೋಕಾಯುಕ್ತಕ್ಕೆ ಹಣ ನೀಡಿದ ಕುರಿತ ದಾಖಲೆಗಳು ನಿಜವೆಂದು ತಿಳಿದುಬಂದಿದೆ ಎಂದು ಸ್ನೇಹಮಯಿ ಕೃಷ್ಣ ತಿಳಿಸಿದ್ದಾರೆ.
ಬೆಂಗಳೂರು, ಫೆಬ್ರವರಿ 21: ಸಿಸಿಬಿ ಕ್ರೈಂ ಪೊಲೀಸರಿಂದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿಚಾರಣೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಆಯುಕ್ತ ಡಿ.ವಿ. ನಟೇಶ್ ನೀಡಿದ ದೂರಿನ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ನಟೇಶ್ ಅವರು, ತಾನು ಆಡಿಯೋ ಸೃಷ್ಟಿಸಿ ಫೇಸ್‌ಬುಕ್‌ನಲ್ಲಿ ಹಾಕಿದ್ದೇನೆ ಹಾಗೂ ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ವಿರುದ್ಧ ಸುಳ್ಳು ಆರೋಪ ಮಾಡಿದ್ದೇನೆ ಎಂದು ದೂರು ನೀಡಿದ್ದರು. ಈ ದೂರು ಹಿನ್ನೆಲೆ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನನ್ನು ವಿಚಾರಣೆಗಾಗಿ ಕರೆತರಲಾಗಿತ್ತು ಹೊರತು ಬಂಧಿಸಿಲ್ಲ ಎಂದು ಹೇಳಿದ್ದಾರೆ. ನಟೇಶ್ ಹಾಗೂ ವಿನೋದ್ ಮಧ್ಯೆ ಹಣಕಾಸಿನ ವಿಚಾರ ನಡೆದಿತ್ತು. ನಟೇಶ್ ದುಡ್ಡು ಕೇಳಬಾರದು ಅಂತಾ ಈ ರೀತಿ ಮಾಡಿದ್ದಾನೆ. ಆಡಿಯೋ ನಿಜ, ಆದರೆ ಶಾಲಿನಿ ರಜನೀಶ್ ವಿರುದ್ಧದ ಆರೋಪ ಸುಳ್ಳು. ಮುಡಾ ಪ್ರಕರಣಕ್ಕೂ ಹಾಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸ್ನೇಹಮಯಿ ಕೃಷ್ಣ ಹೇಳಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Feb 21, 2026 02:34 PM
ಹೈಕಮಾಂಡ್ ಹೇಳಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ: ಪ್ರಿಯಾಂಕ್ ಖರ್ಗೆ
ಕೆಆರ್ ಮಾರುಕಟ್ಟೆ ಫ್ಲೈಓವರ್ ಮೂಲಕ ಚಾಮರಾಜಪೇಟೆಗೆ ಹೋಗುವ ಲೂಪ್ ರಸ್ತೆ ಬಂದ್
ಕೊನೆಯ ಆಷಾಢ ಶುಕ್ರವಾರ; ಚಾಮುಂಡಿ ದರ್ಶನ ಪಡೆದ ತೆಲುಗು ನಟ ಸುನಿಲ್
ಸುರಂಗ ರಸ್ತೆ ಯೋಜನೆ ಪ್ರಶ್ನಿಸಿ ಪಿಐಎಲ್: ಹೈಕೋರ್ಟ್ನಿಂದ ನೋಟಿಸ್

