ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್

Edited By:

Updated on: Feb 21, 2026 | 2:35 PM

ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಡಿ.ವಿ. ನಟೇಶ್‌ ದೂರಿನ ಸಂಬಂಧ ವಿಚಾರಣೆಗಾಗಿ ಕರೆತರಲಾಗಿತ್ತು. ಯಾವುದೇ ಬಂಧನವಾಗಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಸೈಬರ್ ಕ್ರೈಂ ಪೊಲೀಸರ ವಿಚಾರಣೆ ವೇಳೆ, ನಟೇಶ್‌ರ ಆಡಿಯೋ ಹಾಗೂ ಲೋಕಾಯುಕ್ತಕ್ಕೆ ಹಣ ನೀಡಿದ ಕುರಿತ ದಾಖಲೆಗಳು ನಿಜವೆಂದು ತಿಳಿದುಬಂದಿದೆ ಎಂದು ಸ್ನೇಹಮಯಿ ಕೃಷ್ಣ ತಿಳಿಸಿದ್ದಾರೆ.

ಬೆಂಗಳೂರು, ಫೆಬ್ರವರಿ 21: ಸಿಸಿಬಿ ಕ್ರೈಂ ಪೊಲೀಸರಿಂದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿಚಾರಣೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಆಯುಕ್ತ ಡಿ.ವಿ. ನಟೇಶ್ ನೀಡಿದ ದೂರಿನ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ನಟೇಶ್ ಅವರು, ತಾನು ಆಡಿಯೋ ಸೃಷ್ಟಿಸಿ ಫೇಸ್‌ಬುಕ್‌ನಲ್ಲಿ ಹಾಕಿದ್ದೇನೆ ಹಾಗೂ ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ವಿರುದ್ಧ ಸುಳ್ಳು ಆರೋಪ ಮಾಡಿದ್ದೇನೆ ಎಂದು ದೂರು ನೀಡಿದ್ದರು. ಈ ದೂರು ಹಿನ್ನೆಲೆ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನನ್ನು ವಿಚಾರಣೆಗಾಗಿ ಕರೆತರಲಾಗಿತ್ತು ಹೊರತು ಬಂಧಿಸಿಲ್ಲ ಎಂದು ಹೇಳಿದ್ದಾರೆ.  ನಟೇಶ್ ಹಾಗೂ ವಿನೋದ್ ಮಧ್ಯೆ ಹಣಕಾಸಿನ ವಿಚಾರ ನಡೆದಿತ್ತು. ನಟೇಶ್ ದುಡ್ಡು ಕೇಳಬಾರದು ಅಂತಾ ಈ ರೀತಿ ಮಾಡಿದ್ದಾನೆ. ಆಡಿಯೋ ನಿಜ, ಆದರೆ ಶಾಲಿನಿ ರಜನೀಶ್ ವಿರುದ್ಧದ ಆರೋಪ ಸುಳ್ಳು. ಮುಡಾ ಪ್ರಕರಣಕ್ಕೂ ಹಾಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸ್ನೇಹಮಯಿ ಕೃಷ್ಣ ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Feb 21, 2026 02:34 PM
Loading...
Unable to load recommendations.
Follow Us
ಶಿವಪ್ರಸಾದ್​ ಬಿ.

2015 ರಲ್ಲಿ ಸಮಯ ವಾಹಿನಿ ಮೂಲಕ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವರದಿಗಾರನಾಗಿ ವೃತ್ತಿ ಆರಂಭಿಸಿದೆ. ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಹಿರಿಯ ಕ್ರೈಮ್ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ . ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿಗಳನ್ನು ಮಾಡುತ್ತಿದ್ದೇನೆ. ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನವನಾಗಿದ್ದು, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಂಎಸ್ (ಕಮ್ಯೂನಿಕೇಷನ್) ಸ್ನಾತಕೋತ್ತರ ಪದವಿ ಹಾಗೂ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಕಾನೂನು ಪದವೀಧರನಾಗಿದ್ದೇನೆ.

Read More