ಡಿಸೆಂಬರ್ 5ರ ಹಾಸನ ಸ್ವಾಭಿಮಾನ ಸಮಾವೇಶದ ಬಗ್ಗೆ ವಿವರಣೆ ನೀಡಿದ ಸಚಿವ ಹೆಚ್ ಸಿ ಮಹದೇವಪ್ಪ
ಸಮಾವೇಶ ನಡೆಸಲು ಎಐಸಿಸಿಯಿಂದ ಅನುಮತಿ ಪಡೆಯಲಾಗಿದೆ ಮತ್ತು ಇದೊಂದು ಹೋರಾಟದ ವೇದಿಕೆಯಾಗಿರುವುದರಿಂದ ಬೇರೆ ಬೇರೆ ಜಿಲ್ಲೆಗಳ ಸುಮಾರು 5 ಲಕ್ಷ ಜನ ಸಮಾವೇಶದಲ್ಲಿ ಭಾಗಿಯಾಗುವು ನಿರೀಕ್ಷೆ ಇದೆ ಎಂದು ಮಹದೇವಪ್ಪ ಹೇಳಿದರು. ವರಿಷ್ಠರು ಸಹ ಸಮಾವೇಶದಲ್ಲಿ ಭಾಗಿಯಾಗುವರೇ ಅನ್ನೋದನ್ನು ಅವರು ತಿಳಿಸಲಿಲ್ಲ.
ಹಾಸನ: ನಗರದಲ್ಲಿ ಡಿಸೆಂಬರ್ 5 ರಂದು ಶೋಷಿತ ಸಮುದಾಯಗಳ ಒಕ್ಕೂಟ ಮತ್ತು ಪ್ರದೇಶ ಕಾಂಗ್ರೆಸ್ ಸಮಿತಿ ಸಂಯುಕ್ತ ಆಶ್ರಯದಲ್ಲಿ ನಡೆಸಲಾಗುವ ಸಮಾವೇಶಕ್ಕೆ ಸಂಬಂಧಿಸಿದಂತೆ ನಗರದಲ್ಲಿಂದು ಸುದ್ದಿಗೋಷ್ಠಿಯೊಂದನ್ನು ನಡೆಸಿ ಮಾತಾಡಿದ ಸಮಾಜ ಕಲ್ಯಾಣ ಸಚಿವ ಡಾ ಹೆಚ್ ಸಿ ಮಹಾದೇವಪ್ಪ, ಇದು ಕಾಂಗ್ರೆಸ್ ಸಮಾವೇಶ ಅಲ್ಲ, ಆದರೆ ದಶಕಗಳಿಂದ ಕಾಂಗ್ರೆಸ್ ನಡೆಸಿಕೊಂಡು ಬಂದಿರುವ ಹೋರಾಟಕ್ಕೆ ಸದಾ ಬೆಂಬಲ ನೀಡುತ್ತಾ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಪಕ್ಷದೊಂದಿಗೆ ಕೈ ಜೋಡಿಸುತ್ತಿರುವ ಶೋಷಿತ ವರ್ಗಗಳ ಒಕ್ಕೂಟ ನಡೆಸುತ್ತಿರುವ ಸ್ವಾಭಿಮಾನ ಸಮಾವೇಶವಾಗಿದೆ, ಅದರೆ ಈ ಸಮುದಾಯದಲ್ಲಿ ಕಾಂಗ್ರೆಸ್ ನಾಯಕರೂ ಇರೋದ್ರಿಂದ ಸಮಾವೇಶವನ್ನು ಎರಡರ ಜಂಟಿ ಅಶ್ರಯದಲ್ಲಿ ನಡೆಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos
ಸ್ಫೋಟಕ ಬ್ಯಾಟರ್ಗಳನ್ನು ಪೆವಿಲಿಯನ್ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ

