Karnataka Assembly Election Results: ಚಾಮರಾಜನಗರ ಹಾಗೂ ವರುಣಾ ಎರಡು ಕ್ಷೇತ್ರಗಳಲ್ಲೂ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ ಸೋಮಣ್ಣ
ಜನರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನೀಡಿರುವ ಡಬಲ್ ಎಂಜಿನ್ ಸರ್ಕಾರದ ಘೋಷಣೆಯಲ್ಲೂ ಅಪಾರ ಭರವಸೆ ಇದೆ ಎಂದು ಸೋಮಣ್ಣ ಹೇಳಿದರು.
ಮೈಸೂರು: ಚಾಮರಾಜನಗರ ಮತ್ತು ವರುಣಾ (Varuna) ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಿರುವ ಸಚಿವ ವಿ ಸೋಮಣ್ಣ (V Somanna) ಎರಡರಲ್ಲೂ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು. ನಗರದಲ್ಲಿಂದು ತಾಯಿ ಚಾಮುಂಡೇಶ್ವರಿಗೆ (Chamundeshwari) ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಸೋಮಣ್ಣ ಎರಡು ಕ್ಷೇತ್ರಗಳ ಮತದಾರರೊಂದಿಗೆ ತಾನು 40 ವರ್ಷಗಳ ರಾಜಕೀಯ ಅನುಭವ ಹಂಚಿಕೊಂಡಿದ್ದು ಅವರು ತನ್ನ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂದರು. ಜನರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನೀಡಿರುವ ಡಬಲ್ ಎಂಜಿನ್ ಸರ್ಕಾರದ ಘೋಷಣೆಯಲ್ಲೂ ಅಪಾರ ಭರವಸೆ ಇದೆ ಎಂದು ಸೋಮಣ್ಣ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: May 13, 2023 10:12 AM