DKS clears the air; ಕಾಂಗ್ರೆಸ್ ಸೇರುವ ಬಗ್ಗೆ ಸೋಮಣ್ಣ ಯಾವತ್ತೂ ನನ್ನೊಂದಿಗೆ ಮಾತಾಡಿಲ್ಲ: ಡಿಕೆ ಶಿವಕುಮಾರ್
ಬೆಂಗಳೂರಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಶಿವಕುಮಾರ್, ಕಾಂಗ್ರೆಸ್ ಸೇರುವ ಬಗ್ಗೆ ಸೋಮಣ್ಣ ಆಗಲೀ ಬೇರೆ ಯಾರೇ ಆಗಲಿ ತನ್ನೊಂದಿಗೆ ಮಾತಾಡಿಲ್ಲ, ಎಲ್ಲರೂ ತಮ್ಮ ತಮ್ಮ ಪಕ್ಷಗಳ ಕೆಲಸದಲ್ಲಿ ಮಗ್ನರಾಗಿದ್ದಾರೆ ಎಂದು ಹೇಳಿದರು.
ಬೆಂಗಳೂರು: ವಸತಿ ಖಾತೆ ಸಚಿವ ವಿ ಸೋಮಣ್ಣ (V Somanna) ಅವರ ಮರ್ಮ ಯಾರಿಗೂ ಗೊತ್ತಾಗುತ್ತಿಲ್ಲ ಮಾರಾಯ್ರೇ. ಆಫ್ ಕೋರ್ಸ್ ಅವರು ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರುತ್ತಿದ್ದೇನೆ ಅಂತ ಎಲ್ಲೂ ಹೇಳಿಲ್ಲ. ಆದರೆ, ಡಿಕೆ ಶಿವಕುಮಾರ್ (DK Shivakumar) ಕುಟುಂಬದ ಜೊತೆ ಸೌಹಾರ್ದಯುತ ಸಂಬಂಧ ಇಟ್ಟುಕೊಂಡಿರುವುದು, ಕೆಪಿಸಿಸಿ ಅಧ್ಯಕ್ಷರ (KPCC president) ಜೊತೆ ಆಗಾಗ ಮಾತಾಡುತ್ತಿರುವುದು ಎಲ್ಲರಿಗೆ ಗೊತ್ತಿರುವ ಸಂಗತಿ. ಬುಧವಾರ ಬೆಂಗಳೂರಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಶಿವಕುಮಾರ್, ಕಾಂಗ್ರೆಸ್ ಸೇರುವ ಬಗ್ಗೆ ಸೋಮಣ್ಣ ಆಗಲೀ ಬೇರೆ ಯಾರೇ ಆಗಲಿ ತನ್ನೊಂದಿಗೆ ಮಾತಾಡಿಲ್ಲ ಎಲ್ಲರೂ ತಮ್ಮ ತಮ್ಮ ಪಕ್ಷಗಳ ಕೆಲಸದಲ್ಲಿ ಮಗ್ನರಾಗಿದ್ದಾರೆ ಎಂದು ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ