ಕಾಂಗ್ರೆಸ್ನವರೊಂದಿಗೆ ಸೇರಿ ನನ್ನ ವರ್ಚಸ್ಸು ಹಾಳು ಮಾಡಲು ಯತ್ನ: ಬಿಜೆಪಿ ನಾಯಕರ ಮೇಲೆ ಕುಮಾರಸ್ವಾಮಿ ಗರಂ
ಮಂಡ್ಯ ಪ್ರವಾಸ ಬಳಿಕ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ, ಕಾಂಗ್ರೆಸ್ನವರ ಜೊತೆ ಕೆಲ ಬಿಜೆಪಿಗರು ಸೇರಿಕೊಂಡಿದ್ದಾರೆ. ನನ್ನ ವರ್ಚಸ್ಸು ಹಾಳು ಮಾಡಲು ಕೆಲ ಬಿಜೆಪಿ ನಾಯಕರು ಯತ್ನಿಸುತ್ತಿದ್ದಾರೆ. ಇದಕ್ಕೆ ನಾನು ಆಸ್ಪದ ಕೊಡಲ್ಲ ಎಂದು ಹೇಳಿದ್ದಾರೆ.
ಬೆಂಗಳೂರು, ಅಕ್ಟೋಬರ್ 20: ಮೈತ್ರಿ ಪಾಲನೆ ವಿಚಾರವಾಗಿ ನನ್ನ ವರ್ಚಸ್ಸು ಹಾಳು ಮಾಡಲು ಕೆಲ ಬಿಜೆಪಿ ನಾಯಕರ ಯತ್ನಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ (HD Kumaraswamy) ಬಿಜೆಪಿ ನಾಯಕರ ಮೇಲೆ ಗರಂ ಆಗಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ನವರ ಜೊತೆ ಕೆಲ ಬಿಜೆಪಿಗರು ಸೇರಿಕೊಂಡಿದ್ದಾರೆ. ಇದಕ್ಕೆ ನಾನು ಆಸ್ಪದ ಕೊಡಲ್ಲ. ಈ ವಿಚಾರವಾಗಿ ಡಿ.ಕೆ.ಶಿವಕುಮಾರ್ ಅವರನ್ನು 2-3 ಬಾರಿ ಬೇಟಿ ಆಗಿದ್ದಾರೆ. ಪಕ್ಕದ ಕ್ಷೇತ್ರದ ಶಾಸಕರ ಜೊತೆಗೂ ಸಂಪರ್ಕದಲ್ಲಿ ಇದ್ದಾರೆ. ಇದೆಲ್ಲವೂ ಚರ್ಚೆ ನಡೀತಿದೆ. ಒಟ್ಟಾರೆ ಕುಮಾರಸ್ವಾಮಿ ಹೆಸರು ಹಾಳು ಮಾಡಬೇಕು. ಬಿಜೆಪಿ ವರಿಷ್ಠರ ಜೊತೆಗೆ ಸಂಬಂಧ ಹಾಳು ಮಾಡುವ ಕೆಲಸವಾಗುತ್ತಿದ್ದು, ಅದಕ್ಕೆ ನಾನು ಯಾಕೆ ಬಲಿ ಆಗಬೇಕು ಎಂದಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
ಸ್ಫೋಟಕ ಬ್ಯಾಟರ್ಗಳನ್ನು ಪೆವಿಲಿಯನ್ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
